ವಿಶ್ವವಿಖ್ಯಾತ ಮೈಸೂರು ದಸರಾ ಬಗ್ಗೆ ರೀಲ್ಸ್ ಮಾಡುವವರಿಗೆ ಸರ್ಕಾರದಿಂದ ವಿಶೇಷ ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯುವಕ, ಯುವತಿಯರು ದಸರಾ ಸಂಭ್ರಮದ ಬಗ್ಗೆ ರೀಲ್ಸ್ ಮಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ.
ಮೈಸೂರು ದಸರಾದ ದೀಪಾಲಂಕಾರ, ಜಂಬೂಸವಾರಿ, ಆಹಾರ ಮೇಳ ಯಾವುದೇ ಇರಲಿ. ಯಾವುದೇ ರೀಲ್ ಕಳುಹಿಸಿದ್ರು, ಆಯ್ಕೆ ಮಾಡಿ 100 ಅತ್ಯುತ್ತಮ ರೀಲ್ಸ್‌ಗೆ ಬಹುಮಾನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.
ನಿತ್ಯ ಲಕ್ಷಾಂತರ ಜನರು ಈ ಅದ್ಭುತ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಮೈಸೂರು ದಸರಾ ಲೈಟಿಂಗ್ಸ್ ಅನ್ನು ಇನ್ನೂ 10 ದಿನಗಳ ಕಾಲ ವಿಸ್ತರಿಸಲು ತೀರ್ಮಾನಿಸಿದ್ದೇವೆ ಎಂದರು. ವಿಡಿಯೋ ಇಲ್ಲಿದೆ ನೋಡಿ.