ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಬ್ಬು ಬೆಳೆಗಾರರ ನಡುವೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ ನಡೆಯಿತು.
ಬೇಡಿಕೆಗಳ ಕುರಿತು ಚರ್ಚಿಸಲು ಚುನ್ನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಸೇರಿದಂತೆ ಎಂಟು ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಂಸದ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಸಿ.ಸಿ. ಪಾಟೀಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೂ ಸಭೆಯಲ್ಲಿ ಉಪಸ್ಥಿತರಿದ್ದರು. ವಿಡಿಯೋ ಇಲ್ಲಿದೆ ನೋಡಿ.