ಸಚಿವ ಯತೀಂದ್ರ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಶ್ರೀಗಳಿಂದ ಆಶೀರ್ವಾದ ಪಡೆದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ, ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್ಮೇಲ್ ಮಾಡುವ ಯತ್ನ ನಡೆದಿದೆ ಎಂದು ಹೇಳಿದರು.
ಸ್ಟಿಂಗ್ ಪ್ರಕರಣದಲ್ಲಿ ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ. ಕಾಂಗ್ರೆಸ್ನ ಓರ್ವ ಮಹಿಳೆ ಈ ಪ್ರಕರಣದಲ್ಲಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.