ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಕುಮ್ಮಕ್ಕು ನೀಡುತ್ತಾ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮಾತನಾಡುತ್ತಿರುವ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ತೀವ್ರ ತಪರಾಕಿ ಹಾಕಿದೆ.
ವಿಶೇಷ ಸಂದರ್ಭಗಳಲ್ಲಿ ಅಂತ್ಯಕ್ರಿಯೆಯ ಹಕ್ಕುಗಳಿಗೆ ಸಂಬಂಧಿಸಿದಂತೆ, ‘ಧರ್ಮ ಮತ್ತು ನಂಬಿಕೆಯ ಸ್ವಾತಂತ್ರ್ಯ’ ಕುರಿತ ವಿಶೇಷ ವರದಿಗಾರರೊಂದಿಗೆ ಸಂವಾದ ನಡೆಯಿತು.
ವಿಶ್ವಸಂಸ್ಥೆಯಲ್ಲಿ ಭಾರತದ ಪ್ರಥಮ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ನೆರೆ ರಾಷ್ಟ್ರದ ನಕಲಿ ಕಾಳಜಿ ಹಾಗೂ ಇಬ್ಬಗೆಯ ನೀತಿಯನ್ನು ಕಟು ಶಬ್ದಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಮೃತಪಟ್ಟ ತಮ್ಮ ಸೈನಿಕರ ಮೃತದೇಹಗಳನ್ನು ಸ್ವೀಕರಿಸಲು ಪಾಕಿಸ್ತಾನ ನಿರಾಕರಿಸಿದ್ದ ಸಂಗತಿಯನ್ನು ಅವರು ಉಲ್ಲೇಖಿಸಿದರು.
ಭಾರತೀಯ ಸೇನೆಯು ಪಾಕಿಸ್ತಾನದ ಅನೇಕ ಸೈನಿಕರಿಗೆ ಮಿಲಿಟರಿ ಗೌರವಗಳನ್ನು ನೀಡಿ, ಇಸ್ಲಾಮಿಕ್ ಸಂಪ್ರದಾಯಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಿತ್ತು, ಎಂದು ಮಂಗಳಾನಂದನ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.