ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ಸಚಿವ ಎನ್. ಚಲುವರಾಯಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ.
ಬುಧವಾರ ಮಾತನಾಡಿದ್ದ ಕುಮಾರಸ್ವಾಮಿ, ರಾತ್ರೋ ರಾತ್ರಿ ಕದ್ದು ನೀರು ಬಿಡುವ ವ್ಯಕ್ತಿಯೊಬ್ಬರು ರಾತ್ರಿ 9 ಗಂಟೆ ಸಮಯದಲ್ಲಿ ಕೋಲು ಹಿಡಿದುಕೊಂಡು ಯಾರ ಮನೆಯ ಗೇಟ್ ತಟ್ಟುತ್ತಿದ್ದರು ಎಂದು ಪ್ರಶ್ನಿಸಿದ್ದರು.
ಇದಕ್ಕೆ ಗುರುವಾರ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಕುಮಾರಸ್ವಾಮಿಯವರಿಗೆ ಮುಖಾಮುಖಿ ಚರ್ಚೆಗೆ ಬರುವಂತೆ ಬಹಿರಂಗ ಸವಾಲು ಹಾಕಿದ್ದಾರೆ.
ಆ ಸಂದರ್ಭದಲ್ಲಿ ಕುಮಾರಸ್ವಾಮಿ ಎಲ್ಲಿದ್ದರು, ಏಕೆ ಕಾಣೆಯಾಗಿದ್ದರು ಹಾಗೂ ತಾವು ಯಾರ ಮನೆಯ ಬಾಗಿಲು ತಟ್ಟಲು ಹೋಗಿದ್ದೆ ಎಂಬುದು ಕುಮಾರಸ್ವಾಮಿಗೆ ಗೊತ್ತಿದೆ. ಅವರನ್ನೇ ಕೇಳಬೇಕು ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.