ಬೆಂಗಳೂರಿನಲ್ಲಿ ಬುಧವಾರ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತದ ದಂತಕಥೆ ಎಂ.ಎಸ್. ಸುಬ್ಬುಲಕ್ಷ್ಮಿ ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಹಾಡೊಂದನ್ನು ಆಲಿಸುತ್ತಿದ್ದ ವೇಳೆ ನಿರ್ಮಲಾ ಸೀತಾರಾಮನ್ ಭಾವುಕರಾಗಿ ಕಣ್ಣೀರಿಟ್ಟ ಪ್ರಸಂಗ ನಡೆಯಿತು.
ಅನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕರ್ನಾಟಕ ಸಂಗೀತದ “ಜೀವಂತ ಆತ್ಮ” ಭಕ್ತಿಯೇ ಎಂದು ಬಣ್ಣಿಸಿದರು.
ಶಾಸ್ತ್ರೀಯ ಸಂಗೀತ ಪರಂಪರೆಯನ್ನು ರೂಪಿಸುವಲ್ಲಿ ವಿವಿಧ ಭಾಷೆಗಳು ಹಾಗೂ ಆಧ್ಯಾತ್ಮಿಕ ಪರಂಪರೆಗಳು ವಹಿಸಿರುವ ಪಾತ್ರವನ್ನೂ ಅವರು ವಿವರಿಸಿದರು.
ಕರ್ನಾಟಕ ಸಂಗೀತದಲ್ಲಿ ಭಕ್ತಿಯೇ ಈ ಪರಂಪರೆಯ ಜೀವಂತ ಆತ್ಮ. ಅದನ್ನು ವಿವಿಧ ಭಾಷೆಗಳ ಅದ್ಭುತ ಸಂಗಮ ಜೀವಂತವಾಗಿರಿಸಿದೆ.
ಒಂದೇ ಸಂಗೀತ ಕಛೇರಿಯಲ್ಲಿ ವಿವಿಧ ಭಾಷಾ ಹಾಗೂ ಆಧ್ಯಾತ್ಮಿಕ ಪರಂಪರೆಗಳು ನದಿಗಳು ಸಮುದ್ರವನ್ನು ಸೇರುವಂತೆ ಒಂದಾಗಿ ಹರಿಯುತ್ತವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.