ದಲಿತ ಸಮುದಾಯದ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR ದಾಖಲಾಗಿದೆ.
ಸೆಪ್ಟೆಂಬರ್ 18ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಬಿ.ಆರ್. ಅಂಬೇಡ್ಕರ್ ಕ್ಷೇಮ ಕ್ರೀಡಾ ಕಲಾ ಸಂಘದ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಿಸಲಾಗಿದೆ.
ಕಳೆದ ವಾರವೂ ಇದೇ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರತ್ಯೇಕ FIR ದಾಖಲಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, 'ದಲಿತ ವಿರೋಧಿ ಎಂಬ ಆರೋಪಗಳಿಗೆ ನಾನು ದೀರ್ಘವಾಗಿ ಹೇಳೋಕೆ ಹೋಗಲ್ಲ. ಆದರೆ, ಅಪಪ್ರಚಾರ ಮಾಡಬೇಡಿ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.