ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಶಾಹಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸಲು ಮುನ್ಸಿಪಲ್ ಕಾರ್ಪೊರೇಷನ್ ಮುಂದಾದ ಹಿನ್ನೆಲೆಯಲ್ಲಿ, ಮಸೀದಿ ಬಳಿ ಘರ್ಷಣೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ನಡೆದ ಘರ್ಷಣೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಘು ಲಾಠಿಚಾರ್ಜ್ ನಡೆಸಿದ್ದಾರೆ.
ಉಜ್ಜಯಿನಿಯಲ್ಲಿ 2028ರಲ್ಲಿ ಭವ್ಯ ಸಿಂಹಸ್ಥ ಮಹಾಕುಂಭ ಮೇಳ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಛತ್ರಿ ಚೌಕ್ ಬಳಿಯ ಖಜುರ್ ವಾಲಿ ಮಸೀದಿಯಿಂದ ಗಣೇಶ್ ಚೌಕ್‌ವರೆಗಿನ 730 ಮೀಟರ್ ರಸ್ತೆಯನ್ನು 15 ಮೀಟರ್‌ಗೆ ವಿಸ್ತರಿಸಲಾಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.