ಪ್ರೇಮಿಗಳ ಸಾರ್ವಕಾಲಿಕ ಶ್ರೇಷ್ಟ ಚಿತ್ರಗಳಲ್ಲಿ ಡಾ.ವಿಷ್ಣುವರ್ಧನ್ ಅಭಿನಯದ ಬಂಧನ ಚಿತ್ರ ಕೂಡ ಒಂದು. ಚಿತ್ರದಲ್ಲಿ ವಿಷ್ಣುವರ್ಧನ್ ಭಗ್ನ ಪ್ರೇಮಿಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಸುಹಾಸಿನಿ ಮತ್ತು ಜೈಜಗದೀಶ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.