ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ 'ಈ ಸಂಜೆ' ಸಾಂಗ್
ಸ್ಯಾಂಡಲ್ ವುಡ್ ನಲ್ಲಿ ನಿರೀಕ್ಷೆ ಮೂಡಿಸಿರುವ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ಹಾಡೊಂದು ರೆಡಿಯಾಗಿದೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅನಂತ್ ನಾಗ್ ಪ್ರಮುಖ ಪಾತ್ರಧಾರಿಗಳು. ಕನ್ನಡದ ಮಟ್ಟಿಗೆ ಸ್ವಲ್ಪ ಹೊಸತೆ ಎನ್ನಬಹುದಾದ ಸಬ್ಜೆಕ್ಟ್ ಇರೋದೇ ಈ ಚಿತ್ರದ ವಿಶಿಷ್ಟತೆ. ಈ ಸಂಜೆಗೆ ಅನ್ನೋ ಹಾಡನ್ನು ಸ್ವತಃ ರಕ್ಷಿತ್ ಶೆಟ್ಟಿ ಬರೆದಿದ್ದಾರೆ. ಹೇಮಂತ್ ಎಂ.ರಾವ್ ನಿರ್ದೇಶನದ 'ಗೋಧಿ ಬಣ್ಣ ಸಾಧಾರಣ ಮೈಕಟ್ಟು 'ಆಲ್ ಜೈಮರ್ಸ್' ಎನ್ನುವ ಮರೆವಿನ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬನ ಸುತ್ತ ನಡೆಯುವ ಕಥೆ.