ಸಾಂದರ್ಭಿಕ ಚಿತ್ರ 
ಮಹಿಳೆ-ಮನೆ-ಬದುಕು

ಹಣೆಯ ಮೇಲೆ ಕುಂಕುಮ ಇಡುವುದರಿಂದ ಆಗುವ ಪ್ರಯೋಜನ

ಕುಂಕುಮ ಧರಿಸಿದ ನಾರಿಯನ್ನು ನೋಡಿದರೆ ಸಾಕ್ಷಾತ್‌ ಮಂಗಳ ಗೌರಿಯಂತೆ ಎನ್ನುವುದುಂಟು. ಭಾರತೀಯ ಸಂಸ್ಕೃತಿಯಲ್ಲಿ ಕುಂಕುಮಕ್ಕೆ ಪವಿತ್ರ ಸ್ಥಾನವಿದೆ ...

ಸಿಂಧೂರಂ ಸೌಂದರ್ಯ ಸಾಧನಂ ಎಂಬ ಮಾತಿದೆ. ಅದರಂತೆ ಕುಂಕುಮ ಧರಿಸಿದ ನಾರಿಯನ್ನು ನೋಡಿದರೆ ಸಾಕ್ಷಾತ್‌ ಮಂಗಳ ಗೌರಿಯಂತೆ ಎನ್ನುವುದುಂಟು. ಭಾರತೀಯ ಸಂಸ್ಕೃತಿಯಲ್ಲಿ ಕುಂಕುಮಕ್ಕೆ ಪವಿತ್ರ ಸ್ಥಾನವಿದೆ. ಮಹಿಳೆಯರು ಅದರಲ್ಲೂ ವಿವಾಹಿತ ಮಹಿಳೆಯರು ಹಣೆಯ ಮೇಲೆ ಕುಂಕುಮ ಇಡುವುದು ಮುತ್ತೈದೆತನದ ಸಂಕೇತವಾಗಿದೆ.
 
ಉತ್ತರ ಭಾರತದಲ್ಲಿ ಕೂದಲಿನ ಬೈತಲೆಯ ಭಾಗದಲ್ಲಿ ಕುಂಕುಮ ನೀಳವಾಗಿ ಹಚ್ಚಿಕೊಳ್ಳುತ್ತಾರೆ. ಉತ್ತರ ಭಾರತದಲ್ಲಿ ಇದು ಮದುವೆಯಾದ ಸ್ತ್ರೀಯರು ಮಾತ್ರ ಹಚ್ಚುವ ಸಂಪ್ರದಾಯ. ಆದರೆ ದಕ್ಷಿಣ ಭಾರತದಲ್ಲಿ ಹುಬ್ಬುಗಳ ನಡುವೆ ಕುಂಕುಮವಿರಿಸುವುದು ಮದುವೆಯಾದ ಸ್ತ್ರೀಯರು ಮಾತ್ರವಲ್ಲ , ಹೆಣ್ಣು ಮಕ್ಕಳು ಕುಂಕುಮ ಇಡುವುದು ಸಂಪ್ರದಾಯವಾಗಿದೆ.

ಭ್ರೂಮಧ್ಯೆ ಕುಂಕುಮ ಧರಿಸಿದರೆ ಅದರಿಂದ ದೇಹದ ಆರೋಗ್ಯದ ಮೇಲೂ ಸಕಾರಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ವೈಜ್ಞಾನಿಕವಾಗಿಯೂ ಒಪ್ಪಲಾಗಿದೆ. ಭ್ರೂಮಧ್ಯೆ ಕುಂಕುಮವಿರಿಸುವ ಭಾಗದಲ್ಲಿ ನಿರ್ನಾಳಗ್ರಂಥಿಗಳಲ್ಲಿಯೇ ಮುಖ್ಯವಾಗಿರುವ ಪಿಟ್ಯುಟರಿ ಗ್ರಂಥಿಯಿದೆ. ಕೆಂಪು ಬಣ್ಣ ಉತ್ತೇಜಕ ಗುಣವನ್ನು ಹೊಂದಿದೆ. ಆದ್ದರಿಂದ ಭ್ರೂಮಧ್ಯೆ ಧರಿಸಿದ ಕುಂಕುಮ ಪಿಟ್ಯುಟರಿ ಗ್ರಂಥಿಯನ್ನು ಉತ್ತೇಜಿಸಿ ಅದರ ಹಾರ್ಮೋನ್‌ ನಿಯಮಿತವಾಗಿ ಸ್ರವಿಸುವಂತೆ ಮಾಡುತ್ತದೆ.

ಇನ್ನು ಕುಂಕುಮ ಹಚ್ಚುವುದರಿಂದ ಋಣಾತ್ಮಕ ಶಕ್ತಿ ದೂರವಾಗುತ್ತದೆ. "ಕಾಸಿನಗಲದ ಕುಂಕುಮ ಧರಿಸಿದ ಪತಿವ್ರತೆಗೆ ಕೆಟ್ಟ ದೃಷ್ಟಿ ತಗಲುವುದಿಲ್ಲ. ಮನೆಗೆ ಅತಿಥಿಗಳು ಬಂದಾಗ, ಶುಭ ಸಮಾರಂಭಗಳಲ್ಲಿ , ಹಬ್ಬ ಹರಿದಿನಗಳಲ್ಲಿ ಅರಶಿನ ಕುಂಕುಮ ನೀಡಿ ಮುತ್ತೈದೆಯರನ್ನು ಗೌರವಿಸುವುದು ಪ್ರಾಚೀನ ಸಂಪ್ರದಾಯ. ಅದು ಮಂಗಲಪ್ರದವೆಂದು ನಂಬಿಕೆ. ಕುಂಕುಮ ಹಚ್ಚುವುದರಿಂದ ಮನಸ್ಸಿನ ಏಕಾಗ್ರತೆ ಹೆಚ್ಚುತ್ತದೆ.  

ಕುಂಕುಮ ಇಡುವುದು ಪ್ರಾಚೀನ ಕಾಲದಿಂದಲೂ ರೂಢಿಯಾಗಿರುವ ಪದ್ಧತಿಯಾಗಿದ್ದು, ಇಂದಿಗೂ ಅದು ಮುಂದುವರಿದುಕೊಂಡು ಬಂದಿದೆ. ಕೇವಲ ವಿವಾಹಿತ ಮಹಿಳೆಯರು ಮಾತ್ರವಲ್ಲದೇ ಎಲ್ಲಾ ಹೆಣ್ಣು ಮಕ್ಕಳು ಹಣೆಯ ಮೇಲೆ ಕುಂಕುಮ ಇಡುವುದು ಶುಭ ಸೂಚಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT