ದಾಳಿ ನಡೆದ ಸ್ಥಳ (ಎಎಫ್ ಪಿ ಚಿತ್ರ) 
ವಿದೇಶ

ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 35 ಸಾವು

ಅಫಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಒಂದೇ ದಿನ ಸಂಭವಿಸಿದ ಎರಡು ಪ್ರಬಲ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು,...

ಕಾಬೂಲ್: ಅಫಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಒಂದೇ ದಿನ ಸಂಭವಿಸಿದ ಎರಡು ಪ್ರಬಲ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಸುಮಾರು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪೂರ್ವ ಕಾಬೂಲ್‌ನ ಶಾ ಶಹೀದ್ ಪ್ರದೇಶದಲ್ಲಿ ಮೊದಲ ಭೀಕರ ಟ್ರಕ್ ಬಾಂಬ್ ಸ್ಫೋಟಗೊಂಡಿದ್ದು, ಈ ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 240ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಫ್ಘನ್ ಸೇನಾ ಶಿಬಿರವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದ್ದು, ಸ್ಫೋಟದ ತೀವ್ರತೆಗೆ ರಸ್ತೆ ನಡುವೆ ಸುಮಾರು 10 ಮೀಟರ್ ವ್ಯಾಪ್ತಿಯಲ್ಲಿ ಗುಂಡಿ ಬಿದ್ದಿದ್ದು, ಅಕ್ಕಪಕ್ಕದ ಮನೆ ಮತ್ತು ಅಂಗಡಿಮುಂಗಟ್ಟಗಳು ಸಂಪೂರ್ಣ ನೆಲಸಮವಾಗಿವೆ.

ಇನ್ನು ಪೊಲೀಸ್ ಅಕಾಡೆಮಿಯ ಹೊರಗಿನ ಗೇಟ್‌ನಲ್ಲಿ ಎರಡನೇ ಸ್ಫೋಟ ಸಂಭವಿಸಿದ್ದು, ಈ ಸ್ಫೋಟದಲ್ಲಿ 20ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಯಾವ ಉಗ್ರ ಸಂಘಟನೆಯೂ ಇದುವರೆಗೂ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT