ಭಯೋತ್ಪಾದಕ ಹಫೀದ್ ಸಯೀದ್ 
ವಿದೇಶ

ಹಪ್ಫೀಜ್ ಸಯೀದ್ ನ ಜೆಯುಡಿಯನ್ನು ಶಂಕಿತ ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಪಾಕಿಸ್ತಾನ

ಭಯೋತ್ಪಾದಕ ಹಫೀದ್ ಸಯೀದ್ ನ ಜಮಾತ್-ಉದ್- ದವಾ(ಜೆಯುಡಿ) ಉಗ್ರ ಸಂಘಟನೆಯನ್ನು ಶಂಕಿತ ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿರುವುದಾಗಿ ಪಾಕಿಸ್ತಾನ ಸರ್ಕಾರ ತಿಳಿಸಿದೆ

ಇಸ್ಲಾಮಾಬಾದ್: ಭಯೋತ್ಪಾದಕ ಹಫೀದ್ ಸಯೀದ್ ನ ಜಮಾತ್-ಉದ್- ದವಾ(ಜೆಯುಡಿ) ಉಗ್ರ ಸಂಘಟನೆಯನ್ನು ಶಂಕಿತ ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿರುವುದಾಗಿ ಪಾಕಿಸ್ತಾನ ಸರ್ಕಾರ ಅಲ್ಲಿನ ಸಂಸತ್ ಗೆ ತಿಳಿಸಿದೆ.

ನಿಷೇಧಿತ ಗುಂಪುಗಳನ್ನು ನಿಯಂತ್ರಿಸುವಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಪಾತ್ರದ ಬಗ್ಗೆ ಪಾಕ್ ನ ಸಂಸತ್ ನಲ್ಲಿ ನಡೆದ ಚರ್ಚೆ ವೇಳೆ ಪಾಕಿಸ್ತಾನ ಸರ್ಕಾರ ಜೆಯುಡಿ ಸಂಘಟನೆಯನ್ನು ಶಂಕಿತರ ಪಟ್ಟಿಗೆ ಸೇರಿಸಿರುವುದಾಗಿ ತಿಳಿಸಿದೆ. 2008 ರ ನವೆಂಬರ್ 26 ರಂದು ಮುಂಬೈ ನಲ್ಲಿ  ನಡೆದಿದ್ದ ಉಗ್ರ ದಾಳಿಯ ರೂವಾರಿ ಹಫೀಜ್ ಸಯೀದ್  ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಅನೇಕ ಬಾರಿ ಒತ್ತಾಯಿಸಿತ್ತು.

ಜೆಯುಡಿಯನ್ನು ಶಂಕಿತ ಉಗ್ರ ಸಂಘಟನೆ ಪಟ್ಟಿಗೆ ಸೇರಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ಎಂಬುದು ಸಾಬೀತಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನ ಸರ್ಕಾರ ತಿಳಿಸಿದೆ. ಹಫೀದ್ ಸಯೀದ್ ಸಂಘಟನೆಯ ಚಟುವಟಿಕೆಗಳನ್ನು ಪಾಕಿಸ್ತಾನ ಗಮನಿಸುತ್ತಿರುವುದಾಗಿ ಪಾಕಿಸ್ತಾನ ಸಚಿವ ರೆಹಮಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT