ನರೇಂದ್ರ ಮೋದಿ 
ವಿದೇಶ

ಅರಬ್ ಪ್ರವಾಸ: ಪ್ರಧಾನಿ ಮೋದಿಗೆ ಸ್ವಾಗತ ಕೋರಿದ ಯುವರಾಜ ಶೇಖ್ ಮೊಹಮದ್ ಝಾಯಿದ್

ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್(ಅರಬ್ ರಾಷ್ಟ್ರ) ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುದಾಭಿ ತಲುಪಿದ್ದು...

ಅಬುದಾಬಿ: ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್(ಅರಬ್ ರಾಷ್ಟ್ರ) ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುದಾಭಿ ತಲುಪಿದ್ದು, ಯುವರಾಜ ಶೇಖ್ ಮೊಹಮದ್ ಝಾಯಿದ್ ಭವ್ಯ ಸ್ವಾಗತ ಕೋರಿದರು. 
ಏರ್ ಇಂಡಿಯಾ ವಿಮಾನದ ಮೂಲಕ ಅಬುದಾಭಿ ತಲುಪಿದ ಮೋದಿ ಅವರನ್ನು ಶೇಖ್ ಮೊಹಮದ್ ಝಾಯಿದ್ ಆತ್ಮಿಯವಾಗಿ ಬರ ಮಾಡಿಕೊಂಡರು. ಮೊದಲ ಹಂತವಾಗಿ ಯುವರಾಜನ ಜತೆ ಮೋದಿ ಅವರು ಮಾತುಕತೆ ನಡೆಸಲಿದ್ದಾರೆ. ಬಳಿಕ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಜತೆ ಮಾತುಕತೆ ನಡೆಸಲಿದ್ದಾರೆ. 
34 ವರ್ಷಗಳ ನಂತರ ಭಾರತೀಯ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ನೀಡುತ್ತಿರುವುದು. ಇದಕ್ಕೆ ಮೊದಲು ಅಂದರೆ 1981ರಲ್ಲಿ ದಿವಂಗತ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಭೇಟಿ ನೀಡಿದ್ದರು.
ಪ್ರಧಾನಿ ಮೋದಿ ಅವರ ಪ್ರವಾಸದ ವೇಳೆ ಭಾರತದ ಆರ್ಥಿಕತೆ, ಇಂಧನ ಮತ್ತು ರಕ್ಷಣಾ ಹಿತಾಸಕ್ತಿಗಳಿಗೆ, ವ್ಯಾಪಾರ ವೃದ್ಧಿ ಮತ್ತು ಭಯೋತ್ಪಾದನೆ ನಿಗ್ರಹ ಹಾಗೂ ಬಂಡವಾಳ ಹೂಡಿಕೆ ಸೇರಿದಂತೆ ಹಲವು ಕ್ಷೇತ್ರಗಳ ಬಗ್ಗೆ ಪ್ರಧಾನಿ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಜತೆ ಮಾತುಕತೆ ನಡೆಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel