ಯುಎಇ ಪ್ರವಾಸದ ವೇಳೆ ಐತಿಹಾಸಿಕ ಶೇಖ್ ಜಾಯೆದ್ ಗ್ರಾಂಡ್ ಮಸೀದಿಗೆ ಭೇಟಿ ನೀಡಿದ ಪ್ರಧಾನಿ ಮೋದಿ 
ವಿದೇಶ

ಅಬುಧಾಬಿಯಲ್ಲಿ ದೇವಸ್ಥಾನಕ್ಕೆ ಭೂಮಿ: ಯುಎಇ ಘೋಷಣೆ

ಭಾರತೀಯ ಸಮುದಾಯಕ್ಕಾಗಿ ಅಬುಧಾಬಿಯಲ್ಲಿ ದೇವಸ್ಥಾನ ನಿರ್ಮಿಸಲು ಜಮೀನು ನೀಡುವುದಾಗಿ ಯುಎಇ ಭರವಸೆ ನೀಡಿದೆ.

ಅಬುಧಾಬಿ: ಭಾರತೀಯ ಸಮುದಾಯಕ್ಕಾಗಿ ಅಬುಧಾಬಿಯಲ್ಲಿ ದೇವಸ್ಥಾನ ನಿರ್ಮಿಸಲು ಜಮೀನು ನೀಡುವುದಾಗಿ ಯುಎಇ ಭರವಸೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ  ಅವರ ಯುಎಇ ಭೇಟಿಯ ಮೊದಲ ದಿನವೇ ಅಲ್ಲಿನ ಆಡಳಿತ ಇಂತಹದ್ದೊಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್, ಭಾರತೀಯ ಸಮುದಾಯದವರ ದೀರ್ಘಕಾಲದ ಕಾಯುವಿಕೆ ಅಂತ್ಯಗೊಂಡಿದೆ. ಪ್ರಧಾನಿ ಮೋದಿಯ ಭೇಟಿ ದಿನವೇ ಯುಎಇ ಸರ್ಕಾರ ದೇವಸ್ಥಾನಕ್ಕೆ ಭೂಮಿ ನೀಡುವ ನಿರ್ಧಾರ ಕೈಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅಬುಧಾಬಿಯ ಐತಿಹಾಸಿಕ ಶೇಖ್ ಜಾಯೆದ್ ಗ್ರಾಂಡ್ ಮಸೀದಿಗೆ ಭೇಟಿ ನೀಡಿದರು. ಸುಮಾರು 40 ನಿಮಿಷಗಳ ಕಾಲ ಮಸೀದಿಯಲ್ಲೇ ಕಳೆದರು. ಬಳಿಕ ಅಲ್ಲಿರುವ ಭಾರತೀಯ ಕಾರ್ಮಿಕರನ್ನು ಭೇಟಿಯಾದ ಮೋದಿ, ಅವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳನ್ನು ಪರಿಹರಿಸಲು ಭಾರತ ಸರ್ಕಾರ ಏನು ಮಾಡಬಹುದು ಎಂಬ ಬಗ್ಗೆ ಚರ್ಚಿಸಿದರು.

ಪ್ರಧಾನಿ ಮೋದಿ ಅವರ ಬದುಕಿನ ಬಗೆಗೆಗಿನ ಕಲೆಗಳನ್ನು ಪ್ರದರ್ಶಿಸಲು ದುಬೈ ಮೂಲದ ಭಾರಿಯ ಕಲಾವಿದನಿಗೆ ಭಾರತೀಯ ರಾಯಭಾರ ಕಚೇರಿ ಅವಕಾಶ ನಿರಾಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!