ಥಾಯ್ ಪೊಲೀಸರು ಬಿಡುಗಡೆ ಮಾಡಿರುವ ಸಿಸಿಟಿವಿ ದೃಶ್ಯಾವಳಿಯ ಚಿತ್ರ 
ವಿದೇಶ

ಬ್ಯಾಂಕಾಕ್ ಹಿಂದೂ ದೇಗುಲ ಸ್ಫೋಟ: ಸಿಸಿಟಿವಿಯಲ್ಲಿ ಉಗ್ರನ ಕೈಚಳಕ ಸೆರೆ

ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹಿಂದೂ ದೇವಾಲಯದ ಬಳಿ ಸೋಮವಾರ ಸಂಭವಿಸಿದ್ದ ಪ್ರಬಲ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಯ್ ಪೊಲೀಸರು ಇದೇ ಮೊದಲ ಬಾರಿಗೆ ಉಗ್ರನ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ಬ್ಯಾಂಕಾಕ್: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹಿಂದೂ ದೇವಾಲಯದ ಬಳಿ ಸೋಮವಾರ ಸಂಭವಿಸಿದ್ದ ಪ್ರಬಲ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಯ್ ಪೊಲೀಸರು ಇದೇ ಮೊದಲ ಬಾರಿಗೆ ಉಗ್ರರ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ಬ್ಯಾಂಕಾಕ್ ಪೊಲೀಸರು ಬಿಡುಗಡೆ ಮಾಡಿರುವ ಈ ದೃಶ್ಯಾವಳಿಯಲ್ಲಿ ಹಳದಿ ಬಣ್ಣದ ಟೀಶರ್ಟ್ ತೊಟ್ಟಿರುವ ಉಗ್ರನೋರ್ವ ಬಾಂಬ್ ಇರುವ ಬ್ಯಾಗ್ ಅನ್ನು ದೇವಾಲಯದ ಒಳಗೆ ತೆಗೆದು ಹೋಗುತ್ತಾನೆ. ಜನರಿಂದ ತುಂಬಿರುವ ಪ್ರದೇಶದ ಸಮೀಪವಿರುವ ಬೆಂಚ್ ನ ಮೇಲೆ ಕುಳಿತು ತನ್ನ ಬ್ಯಾಗ್ ಅನ್ನು ತೆಗೆದು ಅದರ ಕೆಳಗೆ ಇಟ್ಟು, ತನ್ನ ಸ್ಮಾರ್ಟ್ ಫೋನ್ ನೋಡುತ್ತಲೇ ನೀಲಿ ಬಣ್ಣದ ಕವರ್ ಅನ್ನು ಕೈಯಲ್ಲಿ ಹಿಡಿದು ಯಾರಿಗೂ ಅನುಮಾನ ಬಾರದಂತೆ ಅಲ್ಲಿಂದ ತೆರಳುತ್ತಾನೆ. ಇದಾದ ಕೇವಲ 3 ನಿಮಿಷಗಳಲ್ಲಿ ಬಾಂಬ್ ಸ್ಫೋಟಗೊಂಡು ಸುಮಾರು 20 ಮಂದಿ ಮೃತಪಟ್ಟು, 100 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಘಟನೆಯಲ್ಲಿ ಸಾವನ್ನಪ್ಪಿದವರ ಪೈಕಿ ಕನಿಷ್ಟ 11 ಮಂದಿ ವಿದೇಶಗರಾಗಿದ್ದು, ಚೀನಾ, ಹಾಂಕ್ ಕಾಂಗ್, ಸಿಂಗಾಪುರ, ಇಂಡೋನೇಷ್ಯಾ ಮತ್ತು ಮಲೇಷ್ಯಾ ದೇಶಗಳಿಗೆ ಸೇರಿದವರೆಂದು ತಿಳಿದುಬಂದಿದೆ.

ಚಿದ್ಲೋಮ್ ಜಿಲ್ಲಾ ಕೇಂದ್ರದ ಹೊರವಲಯದಲ್ಲಿನ ಇರಾವಾನ್(ಥಾಯ್ಲೆಂಡ್ ನಲ್ಲಿ ಬ್ರಹ್ಮನನ್ನು ಪ್ರತಿನಿಧಿಸುವ ಮೂರ್ತಿ) ಮಂದಿರದ ಬಳಿ ಸ್ಥಳೀಯ ಕಾಲಮಾನ ಸಂಜೆ 7ಕ್ಕೆ ಸ್ಫೋಟ ಸಂಭವಿಸಿತ್ತು. ಪ್ರಕರಣದ ವಿಚಾರಣೆ ನಡೆಸುತ್ತಿರುವ ಥಾಯ್ ಪೊಲೀಸರು ಪ್ರಸ್ತುತ ಶಂಕಿತ ವ್ಯಕ್ತಿ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಪೊಲೀಸ್ ವಕ್ತಾರ ಪ್ರಾವುತ್ ಥವಾರ್ನ್ ಅವರು, ಸಿಸಿಟಿವಿ ದೃಶ್ಯಾವಳಿಗಳ ಅನ್ವಯ ಈತನೇ ದೋಷಿ ಎಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಬ್ಯಾಗ್ ಬಿಟ್ಟು ಬೈಕ್ ಟ್ಯಾಕ್ಸಿಯಲ್ಲಿ ಈತ ತೆರಳಿದ ಕೇವಲ 3 ನಿಮಿಷಗಳ ಅಂತರದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಹೀಗಾಗಿ ಈತ ಪ್ರಯಾಣ ಬೆಳೆಸಿದೆ ಬೈಕ್ ಟ್ಯಾಕ್ಸಿಯ ಕುರಿತು ಪತ್ತೆ ಹಚ್ಚಲು ನಾವು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!