ಇಸ್ಲಾಮಾಬಾದ್: ಅರಬ್ ಸಂಯುಕ್ತ ಒಕ್ಕೂಟ ರಾಷ್ಟ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಕರೆ ಗಂಟೆ ಎಂದು ಪಾಕಿಸ್ತಾನ ಪತ್ರಿಕೆಯೊಂದು ವರದಿ ಮಾಡಿದೆ.
ಆಗಸ್ಟ್ 16 ಮತ್ತು 17ರಂದು ಪ್ರಧಾನಿ ನರೇಂದ್ರ ಮೋದಿ ಸಂಯುಕ್ತ ಅರಬ್ ರಾಷ್ಟ್ರಗಳಾದ ಅಬುದಾಬಿ, ದುಬೈ ಸೇರಿದಂತೆ ಹಲವು ರಾಷ್ಟ್ರಗಳಿಗೆ ಭೇಟಿ ನೀಡಿದ್ದರು.
ಎರಡೂ ದೇಶಗಳು ತಮ್ಮ ಆರ್ಥಿಕ ಸಹಕಾರ ಮತ್ತು ನಿರ್ದಿಷ್ಟವಾದ ಗುರಿಗಳನ್ನು ತಲುಪಲು ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿದ್ದು, ಭಾರತದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಯುಎಇ ಯಿಂದ 75 ಬಿಲಿಯನ್ ಡಾಲರ್ ಆರ್ಥಿಕ ನೆರವು ತರಲಾಗುತ್ತಿದೆ. ಜೊತೆಗೆ ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರ ವಹಿವಾಟಿನಲ್ಲಿ ಶೇ.60 ರಷ್ಟು ಏರಿಕೆ ತರಲು ಶ್ರಮಿಸುತ್ತಿದೆ ಎಂದು ಪಾಕಿಸ್ತಾನ ದಿನ ಪತ್ರಿಕೆಯೊಂದು ತನ್ನ ಸಂಪಾದಕೀಯದಲ್ಲಿ ಬರೆದಿದೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ದೇಶಗಳ ನಿಲುವನ್ನು ಎರಡು ಎರಡು ರಾಷ್ಟ್ರಗಳು ಖಂಡಿಸಿವೆ. ಭಾರತ ಮತ್ತು ಯುಎಇ ನಡುವಣ ಬಾಂಧವ್ಯವೃದ್ಧಿಯು ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವ ರಾಷ್ಚ್ರಗಳಿಗೆ ಎಚ್ಟರಿಕೆಯ ಕರೆ ಗಂಟೆ ಎಂದು ಪತ್ರಿಕೆ ವಿಶ್ಲೇಷಿಸಿದೆ. ದೀರ್ಘಕಾಲದ ಪ್ರಾದೇಶಿಕ ವಿವಾದಗಳನ್ನು ಬಗೆಹರಿಸಿಕೊಳ್ಳಲು ವಿದೇಶಾಂಗ ನೀತಿಯಲ್ಲಿ ಬದಲಾವಣೆ ಅಳವಡಿಸಿಕೊಳ್ಳಲು ಚಿಂತನೆ ನಡೆಸುತ್ತಿವೆ ಎಂದು ಪತ್ರಿಕೆ ಹೇಳಿದೆ.