ನವಾಜ್ ಷರೀಷ್, ನರೇಂದ್ರ ಮೋದಿ 
ವಿದೇಶ

ಕಾಶ್ಮೀರಿ ಪ್ರತ್ಯೇಕತವಾದಿಗಳು 3ನೇಯವರಲ್ಲ: ನವಾಜ್ ಷರೀಫ್

ಕಾಶ್ಮೀರ ಪ್ರತ್ಯೇಕತವಾದಿ ನಾಯಕರೇನು ಮೂರನೇಯವರಲ್ಲ. ಕಾಶ್ಮೀರ ಸಮಸ್ಯೆಯನ್ನು ಬದಿಗಿಟ್ಟು ಭಾರತದೊಂದಿಗಿನ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ...

ಇಸ್ಲಾಮಾಬಾದ್: ಕಾಶ್ಮೀರ ಪ್ರತ್ಯೇಕತವಾದಿ ನಾಯಕರೇನು ಮೂರನೇಯವರಲ್ಲ. ಕಾಶ್ಮೀರ ಸಮಸ್ಯೆಯನ್ನು ಬದಿಗಿಟ್ಟು ಭಾರತದೊಂದಿಗಿನ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಹೇಳಿದ್ದಾರೆ. 
ಕಾಶ್ಮೀರಿ ನಾಯಕರು ಮೂರನೇ ವ್ಯಕ್ತಿಯಲ್ಲ, ಕಾಶ್ಮೀರ ಸಮಸ್ಯೆ ಅಂತ ಬಂದಾಗ ಅವರ ಪಾತ್ರವೂ ಮುಖ್ಯ. ಅವರ ಅಭಿಪ್ರಾಯ ಮತ್ತು ಸಲಹೆ ಕೇಳದೇ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದಾರೆ. 
ಕಾಶ್ಮೀರಿ ಸಮಸ್ಯೆಯನ್ನು ಬದಿಗಿಟ್ಟು ಭಾರತದೊಂದಿಗಿನ ಯಾವುದೇ ಮಾತುಕತೆ ನಿರರ್ಥಕ ಎಂದು ಸಚಿವ ಸಂಪುಟ ಸಭೆಯಲ್ಲಿ ನವಾಜ್ ಷರೀಫ್ ಅವರು ಹೇಳಿದ್ದಾರೆ ಎಂದು ಪಾಕಿಸ್ತಾನ ಪತ್ರಿಕೆಯೊಂದು ವರದಿ ಮಾಡಿದೆ. 
ಭಾರತ ಮತ್ತು ಪಾಕಿಸ್ತಾನ ನಡುವಿನ ಭದ್ರತಾ ಸಲಹೆಗಾರರ ಮಟ್ಟದ ಮಾತುಕತೆ ರದ್ದುಗೊಂಡ ಬೆನ್ನಲ್ಲೇ ನವಾಜ್ ಷರೀಫ್ ಈ ರೀತಿ ಹೇಳಿದ್ದಾರೆ. 
ಎನ್ಎಸ್ಎ ಮಟ್ಟದ ಮಾತುಕತೆಗೂ ಮುನ್ನ ಜಮ್ಮುಕಾಶ್ಮೀರದ ಪ್ರತ್ಯೇಕತಾವಾದಿ ಮುಖಂಡರನ್ನು ಪಾಕ್ ಹೈಕಮೀಷನ್ ಮಾತುಕತೆಗೆ ಆಹ್ವಾನಿಸಿತ್ತು. ಆದರೆ ಭಾರತ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಪಾಕಿಸ್ತಾನ ಪ್ರತ್ಯೇಕತಾವಾದಿ ಮುಖಂಡರ ಜೊತೆ ಮಾತುಕತೆ ನಡೆಸಿಯೇ ಸಿದ್ಧ ಎಂದು ತಿರುಗೇಟು ನೀಡಿತ್ತು. ಈ ಹಿನ್ನೆಲೆಯಲ್ಲಿ ಭದ್ರತಾ ಸಲಹೆಗಾರ ಮಟ್ಟದ ಮಾತುಕತೆ ಅಂತಿಮ ಕ್ಷಣದಲ್ಲಿ ರದ್ದಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!