ವಿದೇಶ

ಈಜಿಪ್ತ್ ನೈಟ್‌ಕ್ಲಬ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ, 16 ಸಾವು

Lingaraj Badiger

ಕೈರೊ: ಈಜಿಪ್ತ್ ರಾಜಧಾನಿ ಕೈರೋದ ನೈಟ್‌ಕ್ಲಬ್‌ವೊಂದರ ಮೇಲೆ ಶುಕ್ರವಾರ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಬೈಕ್ ನಲ್ಲಿ ಬಂದ ಮೂವರು ಮುಸುಕುಧಾರಿಗಳು, ಕ್ಲಬ್ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಭದ್ರತಾ ಸಿಬ್ಬಂದಿ ತಿಳಿಸಿರುವುದಾಗಿ ಅಲ್ಲಿನ ಎಂಇಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಬಾಂಬ್ ದಾಳಿಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

SCROLL FOR NEXT