ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಮಾತುಕತೆಯೊಂದೇ ಪರಿಹಾರ: ಪಾಕಿಸ್ತಾನದ ಸಲಹೆಗಾರ ಸರ್ತಾಜ್ ಅಜೀಜ್

ಪಾಕಿಸ್ತಾನ ವಿದೇಶಾಂಗ ಇಲಾಖೆಯ ಸಲಹೆಗಾರ ಸರ್ತಾಜ್ ಅಜೀಜ್ ಸುಷ್ಮಾ ಸ್ವರಾಜ್ ಪಾಕಿಸ್ತಾನದ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ್ದು ಎಲ್ಲಾ ಸಮಸ್ಯೆಗಳಿಗೂ ಮಾತುಕತೆಯೇ ಪರಿಹಾರ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಸಲಹೆಗಾರ ಸರ್ತಾಜ್ ಅಜೀಜ್ (ಸಂಗ್ರಹ ಚಿತ್ರ)
Srinivas Rao BV
Updated On : 7 Dec 2015, 1:24 am

ಇಸ್ಲಾಮಾಬಾದ್: ಪಾಕಿಸ್ತಾನ ವಿದೇಶಾಂಗ ಇಲಾಖೆಯ ಸಲಹೆಗಾರ ಸರ್ತಾಜ್ ಅಜೀಜ್ ಸುಷ್ಮಾ ಸ್ವರಾಜ್ ಪಾಕಿಸ್ತಾನದ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ್ದು ಎಲ್ಲಾ ಸಮಸ್ಯೆಗಳಿಗೂ ಮಾತುಕತೆಯೇ ಪರಿಹಾರ ಎಂದು ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ಅವರ ಪಾಕಿಸ್ತಾನ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿರುವ ಪಾಕ್ ವಿದೇಶಾಂಗ ಇಲಾಖೆ ಸಲಹೆಗಾರ, ಭಾರತ-ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧ ಉತ್ತಮಗೊಳ್ಳಲು ಮಾತುಕತೆಯೊಂದೇ ಪರಿಹಾರ ಎಂದಿದ್ದಾರೆ.
ಈ ವರೆಗೂ ದ್ವಿಪಕ್ಷೀಯ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ, ಆದರೆ ಭಾರತದ ಷರತ್ತುಗಳನ್ನು ಒಪ್ಪುವುದಿಲ್ಲ ಎಂದು ಹೇಳುತ್ತಿದ್ದ ಸರ್ತಾಜ್ ಅಜೀಜ್ ಈಗ ಎಲ್ಲಾ ಸಮಸ್ಯೆಗಳಿಗೂ ಮಾತುಕತೆಯೇ ಪರಿಹಾರ ಎಂದಿದ್ದಾರೆ. ಹಾರ್ಟ್ ಏಷ್ಯಾದ" ಭದ್ರತಾ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನ.8 ರಂದು ಇಸ್ಲಾಮಾಬಾದ್ ಗೆ ಭೇಟಿ ನೀಡಲಿದ್ದು ಹಾರ್ಟ್ ಏಷ್ಯಾದ" ಭದ್ರತಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments