ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಮುಂದಿನ ತಿಂಗಳು ಸ್ವಿಜರ್ಲ್ಯಾಂಡ್ ನಲ್ಲಿ ಭೇಟಿ ಮಾಡುವ ಸಾಧ್ಯತೆಗಳಿವೆ.
ದಾವೋಸ್ ಕ್ಲೋಸ್ಟರ್ಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ(ವರ್ಲ್ಡ್ ಎಕನಾಮಿಕ್ ಫೋರಮ್)ನ 46 ನೇ ವಾರ್ಷಿಕ ಸಭೆಯಲ್ಲಿ ಉಭಯ ನಾಯಕರು ಭಾಗವಹಿಸಲಿದ್ದು, ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ನ್ಯೂಸ್ ಇಂಟರ್ ನ್ಯಾಷನಲ್ ವರದಿ ಮಾಡಿದೆ.
ಉಭಯ ಪ್ರಧಾನಿಗಳ ಭೇಟಿ ನಂತರ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ವಿದೇಶಾಂಗ ಕಾರ್ಯದರ್ಶಿಗಳ ಸಭೆ ನವದೆಹಲಿಯಲ್ಲೇ ನಡೆಯಬೇಕೆಂದು ಭಾರತ ಹೇಳುತ್ತಿದ್ದರೆ, ಇಸ್ಲಾಮಾಬಾದ್ ನಲ್ಲಿ ನಡೆಯಬೇಕು ಎಂದು ಪಾಕಿಸ್ತಾನ ಒತ್ತಾಯಿಸಿದೆ.