ಸಾಂದರ್ಭಿಕ ಚಿತ್ರ 
ವಿದೇಶ

ಉದ್ಯಮಸ್ನೇಹಿ: ಭಾರತಕ್ಕೆ 97ನೇ ಸ್ಥಾನ

ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಕೇಂದ್ರ ಸರ್ಕಾರ ಸತತವಾಗಿ ಪ್ರಯತ್ನಿಸುತ್ತಿದೆ. ಆದರೆ ಇದುವರೆಗೂ...

ನ್ಯೂಯಾರ್ಕ್: ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಕೇಂದ್ರ ಸರ್ಕಾರ ಸತತವಾಗಿ ಪ್ರಯತ್ನಿಸುತ್ತಿದೆ. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ. 
ಫ್ರೋಬ್ರ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ಈ ವರ್ಷದ ಪಟ್ಟಿಯಲ್ಲಿ ಭಾರತ ಕಜಕಿಸ್ತಾನ, ಘಾನಾದಂತಹ ದೇಶಗಳಿಗಿಂತಲೂ ಹಿಂದೆ ಬಿದ್ದಿದೆ. ಫ್ರೋಬ್ರ್ಸ್ 144 ದೇಶಗಳ ಪಟ್ಟಿ ಬಿಡುಗಡೆ ಮಾಡಿದ್ದು ಈ ಪೈಕಿ ಭಾರತ 97ನೇ ಸ್ಥಾನದಲ್ಲಿದೆ. 
ವಾಣಿಜ್ಯ, ಮುಕ್ತ ಹಣಕಾಸು ವಹಿವಾಟು, ಭ್ರಷ್ಟಾಚಾರ ಮತ್ತು ಗಲಭೆಗಳ ನಿಯಂತ್ರಣ ಮತ್ತಿತರ ಅರ್ಹತೆಗಳಲ್ಲಿ ಭಾರತ ಬಹಳ ಹಿಂದುಳಿದಿದೆ ಎಂದು ಫ್ರೋಬ್ರ್ಸ್ ಹೇಳಿದೆ. ಆರ್ಥಿಕತೆಯಲ್ಲಿ ಭಾರತ ವೇಗವಾಗಿ ಮುನ್ನಡೆದಿದ್ದರೂ ನೀತಿಗಳನ್ನು ಕೈಗೊಳ್ಳುವಲ್ಲಿ ತುಂಬಾ ಹಿಂದೆ ಬಿದ್ದಿದೆ. 
ಒಟ್ಟಾರೆ ಜನಸಂಖ್ಯೆಯಲ್ಲಿ ಯುವಕರೇ ಹೆಚ್ಚಾಗಿರುವುದರಿಂದ ಬೆಳವಣಿಗೆ ಮುನ್ನೋಟ ಸಕಾರಾತ್ಮಕವಾಗಿದೆ. ಉಳಿತಾಯ, ಹೂಡಿಕೆ ಪ್ರಮಾಣ ಮತ್ತು ಜಾಗತಿಕ ಆರ್ಥಿಕತೆಯೊಂದಿಗೆ ಒಗ್ಗೂಡುವ ಪ್ರಕ್ರಿಯೆಯಲ್ಲಿ ಸಾಗಿದೆ ಎಂದು ಸಮೀಕ್ಷೆ ಹೇಳಿದೆ. ಹಾಗಿದ್ದರೂ ಬಡತನ, ಭ್ರಷ್ಟಾಚಾರ, ಹಿಂಸಾಚಾರ, ಮಹಿಳೆ ಮತ್ತು ಮಕ್ಕಳ ವಿರುದ್ಧದ ತಾರತಮ್ಯಇದೆ ಎಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್