ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ (ಸಂಗ್ರಹ ಚಿತ್ರ) 
ವಿದೇಶ

ಡೋನಾಲ್ಡ್ ಟ್ರಂಪ್ ಇಸಿಸ್ ನ ನೇಮಕಾಧಿಕಾರಿ: ಹಿಲರಿ ಕ್ಲಿಂಟನ್ ಟೀಕೆ

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಪರೋಕ್ಷವಾಗಿ ಇಸಿಸ್ ಉಗ್ರ ಸಂಘಟನೆ ಉತ್ತಮ ನೇಮಕಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹೇಳಿದ್ದಾರೆ...

ವಾಷಿಂಗ್ ಟನ್: ಅಮೆರಿಕಕ್ಕೆ ವಲಸೆ ಬರುವ ಮುಸ್ಲಿಂಮರನ್ನು ನಿಷೇಧಿಸಿದರೆ, ಭಯೋತ್ಪಾದನೆ ನಿಯಂತ್ರಣಗೊಳ್ಳುತ್ತದೆ ಎಂದು ಹೇಳಿರುವ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಪರೋಕ್ಷವಾಗಿ ಇಸಿಸ್ ಉಗ್ರ  ಸಂಘಟನೆ ಉತ್ತಮ ನೇಮಕಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಹಿಲರಿ ಕ್ಲಿಂಟನ್ ಹೇಳಿದ್ದಾರೆ.

ಡೋನಾಲ್ಡ್ ಟ್ರಂಪ್ ಇಸಿಸ್ ನ ಉತ್ತಮ ನೇಮಕಾಧಿಕಾರಿಯಾಗಿದ್ದಾರೆ. ಡೋನಾಲ್ಡ್ ಟ್ರಂಪ್ ಅವರ ಹೇಳಿಕೆಯ ದೃಶ್ಯಾವಳಿಯನ್ನು ತೋರಿಸುವ ಮೂಲಕ ಮುಸ್ಲಿಂ ಯುವಕರನ್ನು ಪ್ರಚೋದಿಸಿ ಇಸಿಸ್ ತನ್ನ ಉಗ್ರ  ಸಂಘಟನೆಯ ಬಲವನ್ನು ಹೆಚ್ಚಿಸಿಕೊಳ್ಳುತ್ತಿವೆ. ಡೋನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ಅಥವಾ ಅಮೆರಿಕದ ಹಿತಾಸಕ್ತಿ ವಿರೋಧಿಸುವ ಇಂತಹ ಧರ್ಮಾಂಧತೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಹಿಲರಿ  ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣ ರಂಗೇರುತ್ತಿದ್ದು, ಡೋನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ಇದೀಗ ವಿಪಕ್ಷಗಳ ಪಾಲಿಗೆ ದಾಳವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ