ಪಾಕಿಸ್ತಾನ ಮಾಜಿ ಅಧ್ಯಕ್ಷ ಮುಷರಫ್ (ಸಂಗ್ರಹ ಚಿತ್ರ) 
ವಿದೇಶ

ಸೇನಾಧ್ಯಕ್ಷರೊಂದಿಗೆ ಚರ್ಚಿಸಿಯೇ ತುರ್ತು ಪರಿಸ್ಥಿತಿ ಹೇರಿದ್ದೆ: ಮುಷರಫ್

2007ರಲ್ಲಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಹೇರುವುದಕ್ಕೂ ಮೊದಲು ಸೇನಾಧ್ಯಕ್ಷರೊಂದಿಗೆ ಚರ್ಚಿಸಿದ್ದೆ ಎಂದು ಮಾಜಿ ಅಧ್ಯಕ್ಷ ಜನರಲ್ ಫರ್ವೇಜ್ ಮುಷರಫ್ ಹೇಳಿದ್ದಾರೆ...

ಇಸ್ಲಾಮಾಬಾದ್: 2007ರಲ್ಲಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಹೇರುವುದಕ್ಕೂ ಮೊದಲು ಸೇನಾಧ್ಯಕ್ಷರೊಂದಿಗೆ ಚರ್ಚಿಸಿದ್ದೆ ಎಂದು ಮಾಜಿ ಅಧ್ಯಕ್ಷ ಜನರಲ್ ಫರ್ವೇಜ್ ಮುಷರಫ್ ಹೇಳಿದ್ದಾರೆ.

ಈ ಬಗ್ಗೆ ಡಾನ್ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಮುಷರಫ್, ಪಾಕಿಸ್ತಾನದ ಆಂತರಿಕ ಪರಿಸ್ಥಿತಿ ಗಂಭೀರವಾದ್ದರಿಂದ ಅನಿವಾರ್ಯವಾಗಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಆದರೆ  ಇದಕ್ಕೂ ಮೊದಲು ಅಂದಿನ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಅಶ್ಫಾಕ್ ಫರ್ವೇಜ್ ಖಯಾನಿ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದೆ. ಅಂತೆಯೇ ಅಂದಿನ ಪ್ರಧಾನಿ ಶೌಕತ್ ಎಜೀಜ್ ಅವರನ್ನು  ಸಂಪರ್ಕಿಸಿ ಚರ್ಚಿಸಿದ್ದೆ. ಆ ಬಳಿಕವೇ ತುರ್ತು ಪರಿಸ್ಥಿತಿ ಹೇರಲಾಗಿತ್ತು ಎಂದು ಮುಷರಫ್ ಹೇಳಿದ್ದಾರೆ.

ಅಲ್ಲದೆ ಸೇನಾ ಮುಖ್ಯಸ್ಥ ಖಯಾನಿ ಅವರನ್ನು ಈ ಪ್ರಕರಣದಲ್ಲಿ ಪ್ರಧಾನ ಅರೋಪಿ ಅಪರಾಧಿ ಎಂದು ಹೇಳಿರುವ ಮುಷರಫ್, ಖಯಾನಿ ಅವರು ನವೆಂಬರ್ 27ರಂದು ಪಾಕಿಸ್ತಾನದ  ಸೇನಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಆ ಬಳಿಕವಾದರೂ ತುರ್ತು ಪರಿಸ್ಥಿತಿ ಹಿಂತೆಗೆದುಕೊಳ್ಳಬಹುದಿತ್ತು ಅದರೆ ಅವರು ಹಿಂತೆಗೆದುಕೊಳ್ಳಲಿಲ್ಲ ಎಂದು ಮುಷರಫ್ ಹೇಳಿದ್ದಾರೆ.

2007 ನವೆಂಬರ್ 3ರಿಂದ ಪಾಕಿಸ್ತಾನದಲ್ಲಿ ಸಂವಿಧಾನವನ್ನು ಅಮಾನತ್ತಿನಲ್ಲಿಟ್ಟು ಹೇರಲಾಗಿದ್ದ ಆಂತರಿಕ ತುರ್ತು ಪರಿಸ್ಥಿತಿ ಡಿಸೆಂಬರ್ 15 ರವರೆಗೂ ಮುಂದುವರೆದಿತ್ತು. ಇದೇ ಪ್ರಕರಣ ಸಂಬಂಧ ಮುಷರಫ್ ವಿರುದ್ಧ ದೇಶದ್ರೋಹ ದೂರು ಕೂಡ ದಾಖಲಾಗಿದ್ದು, ಪಾಕಿಸ್ತಾನ ಸುಪ್ರೀಂ ಕೋರ್ಟ್ ಮುಷರಫ್ ಗೆ ಛೀಮಾರಿ ಕೂಡ ಹಾಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel