ಸೌದಿ ಅರೇಬಿಯಾ ಆಸ್ಪತ್ರೆಯಲ್ಲಿ ಅಗ್ನಿ ದುರಂತ: 25 ಬಲಿ
ಸೌದಿ ಅರೇಬಿಯಾದಲ್ಲಿರುವ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ 25ಕ್ಕೂ ಹೆಚ್ಚು ಜನರು...
ದುಬೈ: ಸೌದಿ ಅರೇಬಿಯಾದಲ್ಲಿರುವ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ 25ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ದಕ್ಷಿಣ ಸೌದಿಯಲ್ಲಿರುವ ಜಝಾನ್ ಜನರಲ್ ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಗೆ ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ತಿಳಿದು ಬಂದಿಲ್ಲ. ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಇತರೆ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬೆಂಕಿ ಅವಘಡದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ನಾಗರಿಕ ರಕ್ಷಣಾ ಏಜೆನ್ಸಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.