ವಿದೇಶ

ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ವಲಸೆ ಅಧಿಕಾರಿಗಳಿಂದ ಕಿರುಕುಳ: 16 ಕ್ಕೂ ಹೆಚ್ಚು ವಿದ್ಯಾರ್ಥಿಗಳ ವೀಸಾ ರದ್ದು

Srinivas Rao BV

ನವದೆಹಲಿ: ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 19 ವಿದ್ಯಾರ್ಥಿಗಳನ್ನು ಗಡಿಪಾರು ಮಾಡಿದ ಪ್ರಕರಣದ ಬೆನ್ನಲ್ಲೇ ಇನ್ನೂ ಹಲವು ಜನ ಭಾರತೀಯ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗಿದೆ.
ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಅಮೆರಿಕಾದ ವಲಸೆ ಅಧಿಕಾರಿಗಳು  16 ಭಾರತೀಯ ವಿದ್ಯಾರ್ಥಿಗಳಿಗೆ ಅಸಂಬದ್ಧ ಪ್ರಶ್ನೆಗಳನ್ನು ಕೇಳಿ ಅಪಮಾನ ಮಾಡಿದ್ದಾರೆ. ಪ್ರಶ್ನೆಗಳಿಗೆ ಪರಿಣಾಮಕಾರಿಯಾಗಿ ಉತ್ತರಿಸಲು ವಿಫಲರಾದ ಹಿನ್ನೆಲೆಯಲ್ಲಿ ಅಮೆರಿಕಾ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಗಡಿಪಾರು ಮಾಡಿದ್ದಾರೆ.
ಅಮೆರಿಕದಲ್ಲಿ ಉನ್ನತ ಶಿಕ್ಷಣ ಕೈಗೊಳ್ಳುವ ಮಹದಾಸೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಸಿಲಿಕಾನ್ ವ್ಯಾಲಿ ವಿಶ್ವವಿದ್ಯಾನಿಲಯ, ಸ್ಯಾನ್ ಜೋಸ್ ಹಾಗೂ ನಾರ್ತ್ ವೆಸ್ಟ್ ಪಾಲಿಟೆಕ್ನಿಕ್ ವಿಶ್ವವಿದ್ಯಾನಿಲಯ, ಫ್ರೆಮಂಟ್ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಲು ಪತ್ರ ಬಂದಿತ್ತು ಎಂದು ಹೇಳಲಾಗಿದೆ.
ಕಳೆದ 24 ಗಂಟೆಗಳಲ್ಲಿ ಮದ್ಯ ಸೇವನೆ ಮಾಡಿದ್ದಿರಾ? ನೀವು ಪ್ರಯಾಣಿಸುವ ವಿಮಾನದಲ್ಲಿದ್ದ ಗಗನಸಖಿ ಯಾವ ರೀತಿಯ ಉಡುಪು ಧರಿಸಿದ್ದರು? ಎಂಬಂತಹ ಅಸಂಬದ್ಧ ಪ್ರಶ್ನೆಗಳನ್ನು ಅಮೆರಿಕಾದ ವಲಸೆ ಅಧಿಕಾರಿಗಳು ಭಾರತೀಯ ವಿದ್ಯಾರ್ಥಿಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

SCROLL FOR NEXT