ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭಾರತದಿಂದ ನಿರ್ಮಾಣವಾಗಿರು ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ.
ಅಫ್ಘಾನಿಸ್ತಾನದ ನೂತನ ಸಂಸತ್ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಪ್ರಧಾನಿ ಮೋದಿ ಅವರು ಕಾಬೂಲ್ ಗೆ ತೆರಳಿದ್ದು, ಕಾಬೂಲ್ ನಲ್ಲಿ ಮೋದಿ ಅವರಿಗೆ ಸಾಂಪ್ರದಾಯಿಕ ಅಭೂತಪೂರ್ವ ಸ್ವಾಗತ ದೊರೆತಿದೆ.
ಅಫ್ಘಾನಿಸ್ತಾನ ಹಾಲಿ ಅಧ್ಯಕ್ಷ ಅಶ್ರಫ್ ಘನಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.