ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ಬಗ್ಗೆ ಹೆಚ್ಚಿನ ನಿರೀಕ್ಷೆ ಬೇಡ: ಸರ್ತಾಜ್ ಅಜೀಜ್

ಮುಂದಿನ ತಿಂಗಳು ನಡೆಯಲಿರುವ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವುದು ಸೂಕ್ತ ಅಲ್ಲ

ಸರ್ತಾಜ್ ಅಜೀಜ್
Srinivas Rao BV
Updated On : 27 Dec 2015, 12:24 pm

ಲಾಹೋರ್: ಮುಂದಿನ ತಿಂಗಳು ನಡೆಯಲಿರುವ ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವುದು ಸೂಕ್ತ ಅಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಭಾರತ-ಪಾಕ್ ದ್ವಿಪಕ್ಷೀಯ ಸಂಬಂಧದ ಬಗ್ಗೆ ರೇಡಿಯೋ ಪಾಕಿಸ್ತಾನದಲ್ಲಿ ಮಾತನಾಡಿದ ಸರ್ತಾಜ್ ಅಜೀಜ್, ಮುಂದಿನ ತಿಂಗಳು ನಡೆಯಲಿರುವ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆಯಿಂದ ತ್ವರಿತ ಫಲಿತಾಂಶದ ಬಗ್ಗೆ  ನಿರೀಕ್ಷೆ ಇಟ್ಟುಕೊಳ್ಳುವುದು ಸೂಕ್ತ ಅಲ್ಲ, ಮಾತುಕತೆಯ ಪ್ರಥಮ ಭಾಗದಲ್ಲಿ ಗಡಿ ಭಾಗದಲ್ಲಿ ಶಾಂತಿಯುತ ವಾತಾವರಣ ಕಾಯ್ದುಕೊಳ್ಳುವ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಜನವರಿ ಮಧ್ಯಭಾಗದಲ್ಲಿ ಇಸ್ಲಾಮಾಬಾದ್ ನಲ್ಲಿ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments