ಕರಾಚಿ: ಭಾರತ ಮತ್ತು ಪಾಕಿಸ್ತಾನ ಶತ್ರು ರಾಷ್ಟ್ರಗಳಾಗಿಯೇ ಮುಂದುವರೆಯಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಗುರುವಾರ ಹೇಳಿದ್ದಾರೆ.
ಈ ಕುರಿತಂತೆ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನಗೆ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ಮಧ್ಯೆಯಿರುವ ಎಲ್ಲಾ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಸುವ ಅಗತ್ಯವಿದೆ. ಭಾರತ-ಪಾಕಿಸ್ತಾನ ಎರಡೂ ದೇಶಗಳು ಶತ್ರುಗಳಾಗಿಯೇ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಎರಡು ದೇಶಗಳ ಮಧ್ಯೆಯಿರುವ ಸಮಸ್ಯೆಗಳ ಕುರಿತಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ನಝೀರ್ ಜಂಜುವಾ ಅವರು ಶೀಘ್ರದಲ್ಲೇ ಸಭೆ ಏರ್ಪಡಿಸಲಿದ್ದು, ಭಾರತದ ಅಧಿಕಾರಿಗಳೊಂದಿಗೆ ಸಮಸ್ಯೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆಂದು ಹೇಳಿದ್ದಾರೆ.