ಉಗ್ರರು(ಸಂಗ್ರಹ ಚಿತ್ರ) 
ವಿದೇಶ

ಈಜಿಪ್ಟ್ ಸೇನೆ ವಾಯು ದಾಳಿಗೆ 25 ಇಸಿಸ್ ಉಗ್ರರು ಬಲಿ

ಈಜಿಪ್ಟ್ ಸೇನೆ ನಡೆಸಿದ ವಾಯು ದಾಳಿಯಲ್ಲಿ 25 ಮಂದಿ ಇಸ್ಲಾಮಿಕ್ ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ...

ಕೈರೋ: ಈಜಿಪ್ಟ್ ಸೇನೆ ನಡೆಸಿದ ವಾಯು ದಾಳಿಯಲ್ಲಿ 25 ಮಂದಿ ಇಸ್ಲಾಮಿಕ್ ಉಗ್ರರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಉತ್ತರ ಸಿನಾಯ್ ಭಾಗದಲ್ಲಿಯ ಇಸ್ಲಾಮಿಕ್ ಉಗ್ರರ ತಾಣಗಳ ಮೇಲೆ ಈಜಿಪ್ಟ್ ಸೇನೆ ಭಾರಿ ಪ್ರಮಾಣದಲ್ಲಿ ವಾಯು ದಾಳಿ ನಡೆಸಿದೆ. ಸ್ವತಃ ಈಜಿಪ್ಟ್ ಅಧ್ಯಕ್ಷ ಅಬ್ಡೆಲ್ ಫತ್ಹಾ ಅಲ್‌ ಸಿಸಿ ಅವರೇ ಮೊದಲ ಬಾರಿಗೆ ಸೇನಾ ಸಮವಸ್ತ್ರ ಧರಿಸಿ ದಾಳಿ ಪ್ರದೇಶಕ್ಕೆ ಭೇಟಿ ನೀಡಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಯೋಧರನ್ನು ಉರಿದುಂಬಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಸ್ಲಾಮಿಕ್ ಉಗ್ರರ ನೆಲೆಗಳಿಂದ ಅಪಾರ ಪ್ರಮಾಣದಲ್ಲಿಯ ಸ್ಫೋಟಕಗಳನ್ನು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅಧ್ಯಕ್ಷ ಮೊಹ್ಮದ್ ಮೋರ್ಸಿ ಅವರ ನಂತರದಲ್ಲಿ ಅಬೈಲ್ ಸಿಸಿ ಸರಕಾರವನ್ನು ಬುಡಮೇಲುಗೊಳಿಸಲು ಇಸ್ಲಾಮಿಕ್ ಉಗ್ರರು ಭಾರಿ ಪ್ರಮಾಣದಲ್ಲಿ ದಾಳಿ ಹಿಂಸಾಚಾರಗಳನ್ನು ನಡೆಸುತ್ತ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!