ಕಾಲ್ತುಳಿತ (ಸಾಂಕೇತಿಕ ಚಿತ್ರ) 
ವಿದೇಶ

ಬಾಂಗ್ಲಾದಲ್ಲಿ ಕಾಲ್ತುಳಿತ: 22 ಜನರ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ

ಬಾಂಗ್ಲಾ ದೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಪೊಲೀಸರು ಹೇಳಿಕೆ ನೀಡಿದ್ದಾರೆ.

ಢಾಕಾ: ಬಾಂಗ್ಲಾ ದೇಶದಲ್ಲಿ ಕಾಲ್ತುಳಿತ ಸಂಭವಿಸಿದ್ದು ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಪೊಲೀಸರು ಹೇಳಿಕೆ ನೀಡಿದ್ದಾರೆ.

ಬಾಗ್ಲಾ ದೇಶದ ಉದ್ಯಮಿಯೊಬ್ಬರು ಬಟ್ಟೆಗಳನ್ನು ದಾನ ನಿಡುವ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿರುವ ಪರಿಣಾಮ ಈ ಅನಾಹುತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ 20 ಜನರು ಸಾವನ್ನಪ್ಪಿದ್ದರೆ, 30 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಬಾಂಗ್ಲಾದೇಶದ ಪೊಲೀಸ್ ಅಧಿಕಾರಿ ಕಮರುಲ್ ಇಸ್ಲಾಂ ತಿಳಿಸಿದ್ದಾರೆ.

ರಾಜಧಾನಿ ಢಾಕಾದ ಉತ್ತರ ಭಾಗಾದಲ್ಲಿರುವ ಮಿಮೆನ್ಸಿಂಗ್ ನಗರದಲ್ಲಿ ಈ ಘಟನೆ ನಡೆದಿದೆ. ಬಾಂಗ್ಲಾದ ಉದ್ಯಮಿಯೊಬ್ಬರು ಉಡುಗೆಗಳನ್ನು ದಾನ ನೀಡಲು ಸಿದ್ಧತೆ ನಡೆಸಿದ್ದರು, ದಾನ ಸ್ವೀಕರಿಸಲು ಆತನ ಮನೆ ಮುಂಭಾಗದಲ್ಲಿ ಸಾರ್ವಜನಿಂಕರು ಕಿಕ್ಕಿರಿದು ನಿಂತಿದ್ದರು. ಸರತಿ ಸಾಲಿನಲ್ಲಿ ನಿಂತಿದ್ದ ಜನರು ಉದ್ಯಮಿ ಮನೆಯ ಗೇಟ್ ನ್ನು ತೆರೆಯುತ್ತಿದ್ದಂತೆಯೇ ಏಕಾಏಕಿ ನುಗ್ಗಿದ ಪರಿಣಾಮ ಕಲಟುಳಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚು ಜನ ಸೇರಿದ್ದ ಹಿನ್ನೆಲೆಯಲ್ಲಿ ಈ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್