ಬರ್ಲಿನ್: ದಕ್ಷಿಣ ಜರ್ಮನ್‌ನಿಯಲ್ಲಿ ದುಷ್ಕರ್ಮಿಯೊಬ್ಬ ಚಲಿಸುವ ಕಾರಿನಿಂದ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬವರಿಯಾ ಪ್ರದೇಶದ ಅನ್ಸ್‌ಬಾಚ್‌ನಗರದಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಓರ್ವ ಮಹಿಳೆ ಹಾಗೂ ಸೈಕಲ್ ಸವಾರ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಹೋಗುತ್ತಿದ್ದ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ.
ಘಟನೆ ಸಂಬಂಧ ಓರ್ವ ಶಂಕಿತ ಆರೋಪಿಯನ್ನು ಬಂಧಿಸಲಾಗಿದ್ದು, ಇತರೆ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ.