ಮನೆಗೆ ಡಿಕ್ಕಿಹೊಡೆದ ವಿಮಾನ: ಮೂವರ ಸಾವು
ಸಣ್ಣ ಗಾತ್ರದ ವಿಮಾನವೊಂದು ಮನೆಗಳಿಗೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆದಿದೆ
ಟೋಕಿಯೋ: ಸಣ್ಣ ಗಾತ್ರದ ವಿಮಾನವೊಂದು ಮನೆಗಳಿಗೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆದಿದೆ.
ವಿಮಾನ ಡಿಕ್ಕಿ ಹೊಡೆದ ಪರಿಣಾಮ ಮನೆಗಳಿಗೆ ಬೆಂಕಿ ಹೊತ್ತಿಕೊಂಡು ಮೂರು ಮಂದಿ ಸಾವನಪ್ಪಿದ್ದಾರೆ. ವಿಮಾನದಲ್ಲಿ ಒಟ್ಟು ಐದು ಮಂದಿ ಪ್ರಯಾಣಿಸುತ್ತಿದ್ದರೂ ಎನ್ನಲಾಗಿದೆ. ವಿಮಾನದಲ್ಲಿದ್ದ ಇಬ್ಬರು ಹಾಗೂ ಮನೆಯೊಳಗಿದ್ದ ಒಬ್ಬ ಮಹಿಳೆ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಇನ್ನು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿದೆ. ವಿಮಾನದಲ್ಲಿದ್ದ ಇನ್ನುಳಿದ ಮಂದಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಪಡೆ ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ. ಇನ್ನು ದುರಂತದಲ್ಲಿ ಮೂರು ಮನೆಗ ಹಾಗೂ ಎರಡು ಕಾರುಗಳು ಭಸ್ಮವಾಗಿವೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.