ವಿಮಾನಕ್ಕೆ ಬೆಂಕಿ ಹಚ್ಚಲು ಮುಂದಾಗಿದ್ದ ಪ್ರಯಾಣಿಕನ ಬಂಧನ
ಷೆನ್ಝೆನ್ ಏರ್ ಲೈನ್ಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ವಿಮಾನ ಇಳಿಯಲು ರನ್ ವೇನಲ್ಲಿ ಸಾಗುತ್ತಿದ್ದ ವೇಳೆ...
ಬೀಜಿಂಗ್: ಷೆನ್ಝೆನ್ ಏರ್ ಲೈನ್ಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ವಿಮಾನ ಇಳಿಯಲು ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ವಿಮಾನಕ್ಕೆ ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ದಕ್ಷಿಣ ಚೀನಾದಲ್ಲಿ ಭಾನುವಾರ ನಡೆದಿದೆ.
ವಿಮಾನ ಇಳಿಯಲು ರನ್ ವೇ ನಲ್ಲಿ ಸಾಗುತ್ತಿದ್ದ ವೇಳೆ ವಿಮಾನದ ಸೀಟಿಗೆ ಬೆಂಕಿ ಹಚ್ಚಲು ಪ್ರಯಾಣಿಕನೊಬ್ಬ ಯತ್ನಿಸಿದ್ದು, ಗಾಬಿರಿಗೊಂಡ ಸಹ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದು ಭಾರಿ ಅನಾಹುತ ತಪ್ಪಿದಂತಾಗಿದೆ. ಈ ವಿಮಾನದಲ್ಲಿ 95 ಮಂದಿ ಪ್ರಯಾಣಿಕರು ಹಾಗೂ 9 ಮಂದಿ ಸಿಬ್ಬಂದಿಯಿದ್ದರು.
ಆದರೆ ವಿಮಾನದ ಒಂದು ಸೀಟ್ ಹಾಗೂ ತುರ್ತು ನಿರ್ಗಮನ ದ್ವಾರದ ಕೆಲ ಭಾಗ ಸುಟ್ಟಿದ್ದು, ಬೆಂಕಿ ನಂದಿಸುವ ವೇಳೆ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪೈಲೆಟ್ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿ ಹಚ್ಚಿದ ವ್ಯಕ್ತಿಯನ್ನು ಬಂಧಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.