ಸಾಂದರ್ಭಿಕ ಚಿತ್ರ 
ವಿದೇಶ

ಉಗ್ರಗಾಮಿ ಸಂಘಟನೆಗಳ ಸುದ್ದಿ ಪ್ರಕಟಣೆಗೆ ನಿಷೇಧ ಹೇರಿದ ಪಾಕಿಸ್ತಾನ

ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಪಟ್ಟ ಸುದ್ದಿಗಳನ್ನು ಪ್ರಕಟಿಸದಂತೆ ಪಾಕಿಸ್ತಾನ ಸರ್ಕಾರ...

ಇಸ್ಲಾಮಾಬಾದ್: ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಪಟ್ಟ ಸುದ್ದಿಗಳನ್ನು ಪ್ರಕಟಿಸದಂತೆ ಪಾಕಿಸ್ತಾನ ಸರ್ಕಾರ ಅಲ್ಲಿನ ಮಾಧ್ಯಮಗಳಿಗೆ ಆದೇಶ ನೀಡಿದೆ.ವಿಶ್ವಸಂಸ್ಥೆಯ ಕಟ್ಟುಪಾಡುಗಳ ಅಡಿಯಲ್ಲಿ ಸರ್ಕಾರದ ಆದೇಶದಂತೆ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ, ಎಲ್ಲಾ ಟಿವಿ ಚಾನೆಲ್ ಗಳು ಮತ್ತು ರೇಡಿಯೋ ಸ್ಟೇಷನ್ ಗಳಿಗೆ ಅಧಿಸೂಚನೆ ಕಳುಹಿಸಿದ್ದು, ಲಷ್ಕರ್-ಇ-ತಯ್ಯಬಾ ಮತ್ತು ಅದರ ಶಾಖೆಗಳಾದ ಜಮಾತ್-ಉದ್-ದಾವಾ ಮತ್ತು ಫಲಾಹ್-ಇ-ಇನ್ಸಾನಿಯತ್ ಫೌಂಡೇಶನ್ ಗೆ ಸಂಬಂಧಪಟ್ಟ ಸುದ್ದಿಗಳನ್ನು ಪ್ರಕಟಿಸದಂತೆ ಆದೇಶ ನೀಡಿದೆ.

ಮುಂಬೈ ದಾಳಿಯ ರೂವಾರಿ ಹಫೀಸ್ ಸಯೀದ್ ಲಷ್ಕರ್-ಇ-ತಯ್ಯಬಾದ ಭಾಗವಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಸರ್ಕಾರ ಹೊರಡಿಸಿದ ಸೂಚನೆಯಲ್ಲಿ, 60 ಸಂಘಟನೆಗಳ ವಿರುದ್ಧ ಹದ್ದಿನ ಕಣ್ಣು ಇರಿಸುವಂತೆ ಆದೇಶಿಸಲಾಗಿದೆ.

ರಾಷ್ಟ್ರೀಯ ಕಾರ್ಯ ಯೋಜನೆ ಪ್ರಕಾರ ಈ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲಾ ಸಂಘಟನೆಗಳು ಕಟ್ಟು ನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಟಿವಿ ಚಾನೆಲ್ ಗಳು ಮತ್ತು ರೇಡಿಯೋ ವಿರುದ್ಧ ದಂಡ ಹಾಕಲಾಗುವುದು ಇಲ್ಲವೇ ಅನುಮತಿಯನ್ನು ತೆಗೆದುಹಾಕಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪಾಕಿಸ್ತಾನದ ಪೇಷಾವರದ ಮಿಲಿಟರಿ ಶಾಲೆಯೊಂದರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 150 ಮಕ್ಕಳು ಸಾವನ್ನಪ್ಪಿದ್ದು, ಈ ಘಟನೆ ನಡೆದ ಬಳಿಕ ರಾಷ್ಟ್ರೀಯ ಕಾರ್ಯ ಯೋಜನೆಯನ್ನು ರೂಪಿಸಲಾಯಿತು.

ದಾಳಿ ನಡೆದ ನಂತರ ಬುಡಕಟ್ಟು ಪ್ರದೇಶದಲ್ಲಿ ಸರ್ಕಾರ ಮತ್ತು ಮಿಲಿಟರಿ ಕಾರ್ಯಾಚರಣೆ ನಡೆಸಲು ನಿರ್ಧರಿಸಿತ್ತು ಮತ್ತು ದೇಶಾದ್ಯಂತ ಎಲ್ಲಾ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ