ಪೂರ್ವ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ 
ವಿದೇಶ

ಪೂರ್ವ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ

ಪೂರ್ವ ಇಂಡೋನೇಷ್ಯಾದಲ್ಲಿ ಬುಧವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.3ರಷ್ಟು ದಾಖಲಾಗಿದೆ...

ಜಕಾರ್ತ: ಪೂರ್ವ ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.3ರಷ್ಟು ದಾಖಲಾಗಿದೆ.

ಸಮುದ್ರದ 77 ಕಿಲೋ ಮೀಟರ್ ಅಡಿ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಕಂಡುಬಂದಿದೆ ಎಂದು ಭೂ ವೈಜ್ಞಾನಿಕ ಸಮೀಕ್ಷೆ ಹೇಳಿಕೊಂಡಿದೆ.

ಭೂಕಂಪನದ ಪರಿಣಾಮ ಇದೀಗ ಕಟ್ಟವೊಂದು ನೆಲಕ್ಕುರುಳಿರುವುದಾಗಿ ತಿಳಿದುಬಂದಿದೆ. ಸಂಪರ್ಕಕ್ಕೆ ಸಿಗದ ಸೂಕ್ಷ್ಮ ಪ್ರದೇಶಗಳನ್ನು ಸಂಪರ್ಕಿಸಲು ಅಧಿಕಾರಿಗಳು ಈಗಾಗಲೇ ಪ್ರಯತ್ನ ಮಾಡುತ್ತಿದ್ದಾರೆ. ಭೂಕಂಪದಿಂದಾಗಿ ಜನರು ಇದೀಗ ಭಯಭೀತರಾಗಿದ್ದು, ಯಾವುದೇ ಸಾವು ನೋವುಗಳ ಸಂಭವಿಸಿಲ್ಲ. ಸುನಾಮಿ ಸಂಭವಿಸುವ ಬಗ್ಗೆ ಈವರೆಗೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!