ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಇಡೀ ವಿಶ್ವಕ್ಕೇ ಬೆದರಿಕೆ: ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್

ಭಯೋತ್ಪಾದಕ ದಾಳಿಯ ಬಗ್ಗೆ ಫ್ರಾನ್ಸ್ ನ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮೇಯರ್ ಗಳನ್ನುದ್ದೇಶಿಸಿ ಮಾತನಾಡಿದ್ದು, ಇಸ್ಲಾಮಿಕ್ ಸ್ಟೇಟ್ ಇಡೀ ವಿಶ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್(ಸಂಗ್ರಹ ಚಿತ್ರ)
Srinivas Rao BV
Updated On : 18 Nov 2015, 8:22 am

ಪ್ಯಾರಿಸ್: ಫ್ರಾನ್ಸ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯ ಬಗ್ಗೆ ಫ್ರಾನ್ಸ್ ನ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮೇಯರ್ ಗಳನ್ನುದ್ದೇಶಿಸಿ ಮಾತನಾಡಿದ್ದು, ಇಸ್ಲಾಮಿಕ್ ಸ್ಟೇಟ್ ಇಡೀ ವಿಶ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ.
ಇಸ್ಲಾಮಿಕ್ ಸ್ಟೇಟ್ ಉಗ್ರರು ಇಡೀ ಫ್ರಾನ್ಸ್ ಮೇಲೆ ದಾಳಿ ನಡೆಸಿದ್ದು, ಐಸೀಸ್ ಉಗ್ರರ ನಿರ್ಮೂಲನೆಗಾಗಿ ಜಾಗತಿಕ ಒಕ್ಕೂಟಕ್ಕೆ ಹೋಲಾಂಡ್ ಕರೆ ನೀಡಿದ್ದಾರೆ. ಭಯೋತ್ಪಾದಕ ದಾಳಿ ಬಗ್ಗೆ ಫ್ರಾನ್ಸ್ ನ ರಾಯಭಾರಿ ಭಾರತಕ್ಕೆ ಮಾಹಿತಿ ನೀಡಿದ್ದು ಪ್ಯಾರಿಸ್ ದಾಳಿಯ ರುವಾರಿ ಅಬ್ದೆಲ್ ಹಮೀದ್ ಅಬೌದ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.
ದಾಳಿಯಲ್ಲಿ ಮೃತಪಟ್ಟ 129 ಜನರ ಗುರುತು ಸಿಕ್ಕಿದ್ದು, 12 ಜನರ ಸ್ಥಿತಿ ಗಂಭೀರವಾಗಿದೆ ಎಂದು ಫ್ರೆಂಚ್ ಸಚಿವ ಸಂಪುಟ ಮಾಹಿತಿ ನೀಡಿದೆ. ಸೈಂಟ್-ಡೆನಿಸ್ ನಲ್ಲಿ ನಡೆದ ಪೊಲೀಸ್ ದಾಳಿಯಲ್ಲಿ ಒಟ್ಟು 7  ಜನರನ್ನು ಬಂಧಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಉಗ್ರರ ಪೈಕಿ ಓರ್ವ ಮಹಿಳಾ ಆತ್ಮಹತ್ಯಾ ಬಾಂಬರ್ ಕೂಡಾ ಸೇರಿದ್ದಾಳೆ ಎಂದು ಫ್ರೆಂಚ್ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments