ಸೋಫಿಯಾ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಇಜಿಪ್ತ್‌ನಿಂದ ಪೊಲ್ಯಾಂಡ್ ರಾಜಧಾನಿ ವರ್ಸಾವ್‌ಗೆ ತೆರಳುತ್ತಿದ್ದ ವಿಮಾನವೊಂದು ಗುರುವಾರ ಬರ್ಗಾಸ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬಲ್ಗೇರಿಯಾದ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿ ಬಾಂಬ್ ಇದೆ ಎಂಬ ವರದಿ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರನ್ನು ಹಾಗೂ ವಿಮಾನ ಸಿಬ್ಬಂದಿಯನ್ನು ವಿಮಾನದಿಂದ ಕೆಳಗಿಳಿಸಿ, ತಪಾಸಣೆ ನಡೆಸಲಾಗಿದ್ದು, ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಬರ್ಗಸ್ ವಿಮಾನ ನಿಲ್ದಾಣದ ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ವಿಮಾನದಲ್ಲಿ ಬಾಂಬ್ ಇರುವ ಸಾಧ್ಯತೆ ಇದೆ ಎಂದು ವಿಮಾನ ಸಿಬ್ಬಂದಿಗೆ ತಿಳಿಸಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆ ವ್ಯಕ್ತಿ ಪಾನಮತ್ತನಾಗಿದ್ದ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.