ಚೀನಾ: ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 21 ಸಾವು
ಹಿಲಾಂಗ್ ಜಿಯಾಂಗ್ ನಲ್ಲಿರುವ ಅತ್ಯಂತ ಹಳೆಯ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭಾರೀ ಅಗ್ನಿ ಸ್ಫೋಟದಲ್ಲಿ 21 ಮಂದಿ ಕಾರ್ಮಿಕರು ಬಲಿಯಾಗಿರುವ ದಾರುಣ...
ಬೀಜಿಂಗ್: ಹಿಲಾಂಗ್ ಜಿಯಾಂಗ್ ನಲ್ಲಿರುವ ಅತ್ಯಂತ ಹಳೆಯ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭಾರೀ ಅಗ್ನಿ ಸ್ಫೋಟದಲ್ಲಿ 21 ಮಂದಿ ಕಾರ್ಮಿಕರು ಬಲಿಯಾಗಿರುವ ದಾರುಣ ಘಟನೆ ಬೀಜಿಂಗ್ ನಲ್ಲಿ ಸಂಭವಿಸಿದೆ.
ಗಣಿಯಲ್ಲಿ ಸುಮಾರು 38 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಇವರಲ್ಲಿ 16 ಮಂದಿ ದುರಂತದಿಂದ ಪಾರಾಗಿದ್ದು, ಉಳಿದವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಅಗ್ನಿ ದುರಂತ ಸಂಭವಿಸಿದ್ದು, 21 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಹಲವರು ಗಂಭೀರ ಗಾಯಗೊಂಡಿರುವ ಪರಿಣಾಮ ಸಾವಿನ ಸಂಖ್ಯೆ ಏರಿಕೆಯಾಗುವ ಭೀತಿ ಎದುರಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.