ಹೊಲಾಂಡೆ-ಮೋದಿ 
ವಿದೇಶ

ಫ್ರಾನ್ಸ್ ಅಧ್ಯಕ್ಷ ಹೊಲಾಂಡೆ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿ

ಭಾರತದ 67ನೇ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

ಕೌಲಾಲಂಪುರ: ಭಾರತದ 67ನೇ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೊಯಿಸ್ ಹೊಲಾಂಡೆ ಅವರು ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಆಹ್ವಾನವನ್ನು ಫ್ರಾನ್ಸ್ ಅಧ್ಯಕ್ಷರು ಒಪ್ಪಿಕೊಂಡಿದ್ದು, ಮುಂದಿನ ವರ್ಷ ಫೆಬ್ರುವರಿ 26ರಂದು ನಡೆಯುವ 67ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಹೊಲಾಂಡೆ ಅವರು ಆಗಮಿಸಲಿದ್ದಾರೆ.

ಮೂರು ದಿನಗಳ ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಬಲಿಷ್ಠ ಪ್ರಾದೇಶಿಕ ಒಕ್ಕೂಟಗಳಾದ ಆಸಿಯಾನ್, ಭಾರತ ಹಾಗೂ ಪೂರ್ವ ಏಷ್ಯಾದ 13ನೇ ಶೃಂಗಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಬಳಿಕ ಉಗ್ರರ ದಾಳಿಗೆ ಒಳಗಾಗಿರುವ ಫ್ರಾನ್ಸ್ ನ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಗಮಿಸುವಂತೆ ಆಹ್ವಾನ ನೀಡುವ ಮೂಲಕ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

ಕಳೆದ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅದ್ಯಕ್ಷ ಬರಾಕ್ ಒಬಾಮಾ ಅವರು ಆಗಮಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT