ಮ್ಯಾನ್ಮಾರ್ ನಲ್ಲಿ ಭೂಕುಸಿತ (ಚಿತ್ರಕೃಪೆ: ರಾಯಿಟರ್ಸ್) 
ವಿದೇಶ

ಮ್ಯಾನ್ಮಾರ್ ಭೂಕುಸಿತ: 100ಕ್ಕೇರಿದ ಸಾವಿನ ಸಂಖ್ಯೆ

ಉತ್ತರ ಮಾಯನ್ಮಾರ್ ಕಚಿನ್ ಜೇಡ್ ಗಣಿಯಲ್ಲಿ ಸಂಭವಿಸಿದ್ದ ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿರುವ ಸಂಖ್ಯೆ 100ಕ್ಕೇರಿದ್ದು, ಮಣ್ಣಿನ ಅವಶೇಷಗಳಡಿಯಲ್ಲಿ ಮತ್ತಷ್ಟು ದೇಹಗಳು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ...

ಯಾನ್ಗೊನ್: ಉತ್ತರ ಮಾಯನ್ಮಾರ್ ಕಚಿನ್ ಜೇಡ್ ಗಣಿಯಲ್ಲಿ ಸಂಭವಿಸಿದ್ದ ಭೂಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿರುವ ಸಂಖ್ಯೆ 100ಕ್ಕೇರಿದ್ದು, ಮಣ್ಣಿನ ಅವಶೇಷಗಳಡಿಯಲ್ಲಿ ಮತ್ತಷ್ಟು ದೇಹಗಳು  ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ಸಂಜೆ ಸಂಭವಿಸಿದ ಭೂಕುಸಿತದಲ್ಲಿ ಈ ವರೆಗೂ ಸುಮಾರು 100 ಶವಗಳನ್ನು ಹೊರತೆಗೆಯಲಾಗಿದ್ದು, ನಾಪತ್ತೆಯಾಗಿರುವ ಸ್ಥಳೀಯರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇನ್ನು ರಕ್ಷಣಾ  ಕಾರ್ಯಾಚರಣೆಗೆ ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಸುಮಾರು 150ಕ್ಕೂ ಅಧಿಕ ಸೈನಿಕರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ  ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಮೃತಪಟ್ಟವರ ಪೈಕಿ ಬಹುತೇಕರು ವಿವಿಧ ಪ್ರದೇಶಗಳಿಂದ ಕೆಲಸಕ್ಕೆ ಬಂದಿದ್ದ ಕೆಲಸಗಾರರು ಎಂದು ತಿಳಿದುಬಂದಿದೆ. ಭೂಕುಸಿತಕ್ಕೆ ಈ ವರೆಗೂ ನಿಗಧಿತ ಕಾರಣ  ತಿಳಿದುಬಂದಿಲ್ಲವಾದರೂ, ಗಣಿಗಾರಿಕೆಯಿಂದ ಗುಡ್ಡದ ತಳದಲ್ಲಿದ್ದ ಮಣ್ಣು ಸಡಿಲಗೊಂಡು ಭೂಕುಸಿತ ಸಂಭವಿಸಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಪ್ರಕರಣ ಸಂಬಂಧ  ತನಿಖೆಗೆ ಆದೇಶಿಸಲಾಗಿದ್ದು, ಕಚಿನ್ ಜೇಡ್ ಸರ್ಕಾರ ತನಿಖೆಯ ಮೇಲುಸ್ತುವಾರಿ ನೋಡಿಕೊಳ್ಳಲಿದೆ ಎಂದು ಮ್ಯಾನ್ಮಾರ್ ಅಧ್ಯಕ್ಷರ ಕಚೇರಿಯ ಹಿರಿಯ ಅಧಿಕಾರಿ ಝಾವ್ ಹ್ಟೇ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video