ಕೆನಡಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಟರ್ಕಿಶ್ ವಿಮಾನ (ಸಂಗ್ರಹ ಚಿತ್ರ) 
ವಿದೇಶ

ಇಸಿಸ್ ದಾಳಿ ಭೀತಿ: ಕೆನಡಾದಲ್ಲಿ ಟರ್ಕಿ ವಿಮಾನ ತುರ್ತು ಭೂಸ್ಪರ್ಶ

ವಿಮಾನದಲ್ಲಿ ಇಸಿಸ್ ಉಗ್ರರು ಬಾಂಬ್ ದಾಳಿ ನಡೆಸುವ ಕುರಿತು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ನ್ಯೂಯಾರ್ಕ್ ಹಾಗೂ ಇಸ್ತಾಂಬುಲ್ ನಡುವೆ ಸಂಚರಿಸುವ ಟರ್ಕಿಶ್ ವಿಮಾನ ಕೆನಡಾ ತುರ್ತು ಭೂಸ್ಪರ್ಶ ಮಾಡಿದ್ದು, ಕೆನಡಾ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ...

ಹೆಲಿಪಾಕ್ಸ್: ವಿಮಾನದಲ್ಲಿ ಇಸಿಸ್ ಉಗ್ರರು ಬಾಂಬ್ ದಾಳಿ ನಡೆಸುವ ಕುರಿತು ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ನ್ಯೂಯಾರ್ಕ್ ಹಾಗೂ ಇಸ್ತಾಂಬುಲ್ ನಡುವೆ ಸಂಚರಿಸುವ ಟರ್ಕಿಶ್ ವಿಮಾನ ಕೆನಡಾ ತುರ್ತು ಭೂಸ್ಪರ್ಶ ಮಾಡಿದ್ದು, ಕೆನಡಾ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ನ್ಯೂಯಾರ್ಕ್ ಹಾಗೂ ಟರ್ಕಿಯ ರಾಜಧಾನಿ ಇಸ್ತಾಂಬುಲ್ ನಡುವೆ ಸಂಚರಿಸುವ ಟರ್ಕಿ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ಕೆನಡಾದ  ಹೆಲಿಪಾಕ್ಸ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವೇಳೆ ಐವರು ಪ್ರಯಾಣಿಕರು ವಿಮಾನದಲ್ಲಿಯೇ ಭಯದಿಂದ ಕೂಗಿಕೊಂಡ ಪರಿಣಾಮ ವಿಮಾನದಲ್ಲಿ ಕೆಲಹೊತ್ತ  ಅಂತಕಕಾರಿ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ವಿಮಾನದ ಸಿಬ್ಬಂದಿಗಳು ಪ್ರಯಾಣಿಕರನ್ನು ಸಮಾಧಾನಿಸಿ ಬಳಿಕ ವಿಮಾನವನ್ನು ಕೆನಡಾದಲ್ಲಿ ಭೂಸ್ಪರ್ಶ ಮಾಡಿಸಿದರು.

ಈ ಬಗ್ಗೆ ಹೆಲಿಪಾಕ್ಸ್ ವಿಮಾನ ನಿಲ್ದಾಣ ಪ್ರಾಧಿಕಾರ ಟ್ವೀಟ್ ಮಾಡಿದ್ದು, ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಟರ್ಕಿಶ್ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಮತ್ತು ವಿಮಾನದಲ್ಲಿ 256  ಪ್ರಯಾಣಿಕರಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಪ್ರಸ್ತುತ ಕೆನಡಾ ಪೊಲೀಸರು ವಿಮಾನದಲ್ಲಿ ಶೋಧಕಾರ್ಯ ನಡೆಸಿದ್ದು, ಸ್ಫೋಟಕಗಳನ್ನು ಪತ್ತೆಹಚ್ಚುವ ನಾಯಿಗಳನ್ನು ಬಳಸಿ ವಿಮಾನದ ಶೋಧವನ್ನು ನಡೆಸಲಾಗಿದೆ. ಬಳಿಕ ವಿಮಾನದಲ್ಲಿ  ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಂತೆಯೇ ಬಾಂಬ್ ಕರೆಯ ಬಗ್ಗೆ ಮಾಹಿತಿ ನೀಡಲು ಸಾಧ್ಯವಿಲ್ಲ, ಈ ಕರೆಯ ಹಿಂದಿರುವ ವ್ಯಕ್ತಿ  ಅಥವಾ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

ನ್ಯೂಯಾರ್ಕ್‌ನ ಜಾನ್.ಎಫ್. ಕೆನಡಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಈ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ ಸ್ಥಳೀಯ ಕಾಲಮಾನ 10.50ರಲ್ಲಿ ಬೆದರಿಕೆ  ಕರೆ ಬಂದಿತ್ತು. ಈ ಹಿನ್ನಲೆಯಲ್ಲಿ ಇಸ್ತಾನ್ ಬುಲ್ ನತ್ತ ಪ್ರಯಾಣ ಬೆಳೆಸಿದ್ದ ಟರ್ಕಿಶ್ ವಿಮಾನ ಕೆನಡಾದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!