ರಿಯಾದ್: ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡಿರುವ ಸೌದಿ ಅರೇಬಿಯಾದ ಮಹಿಳಾ ಅಭ್ಯರ್ಥಿಗಳು ತಮ್ಮ ಮೊದಲ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ.
ಡಿ.12ರಂದು ಸ್ಥಳೀಯ ಸಂಸ್ಥೆಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 900ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಥಿಸಲಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಮತದಾನದ ಹಕ್ಕು ದೊರೆತಿದೆ.
ಅರಸೊತ್ತಿಗೆ ಹೊಂದಿರುವ ಸೌದಿಯಲ್ಲಿ ಪ್ರಜಾಪ್ರಭುತ್ವಕ್ಕೆ ಅವಕಾಶವೇ ಇರಲಿಲ್ಲ. ಪಾಶ್ಚಾತ್ಯ ದೇಶಗಳಿಂದ ಟೀಕೆಗೆ ಒಳಗಾದ ಹಿನ್ನೆಲೆಯಲ್ಲಿ, ಮಹಿಳೆಯರಿಗೆ ಸ್ಪರ್ಧೆ ಅವಕಾಶ ನೀಡಲಾಗಿದೆ.