ಕರಾಚಿ: ಬ್ರಿಟಿಶ್ ಪ್ರಧಾನಿ ಡೇವಿಡ್ ಕ್ಯಾಮರಾನ್ ಮತ್ತು ಅಪ್ಘಾನಿಸ್ಥಾನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಸಭೆ ನಡೆಸಿದ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್, ಭಯೋತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗಲು ಪಾಕಿಸ್ತಾನ ನೆಲದಲ್ಲಿ ಅವಕಾಶ ನೀಡುವುದಿಲ್ಲ ಎಂದು ಮತ್ತೆ ಹೇಳಿದ್ದಾರೆ.
ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆ ಸಮಾವೇಶದ (ಸಿಒಪಿ೨೧) ಜೊತೆಗೆ ಈ ನಾಯಕರು ಸಭೆ ನಡೆಸಿದರು.
ಕಳೆದ ಎರಡು ವರ್ಷಗಳಿಂದ ಭಯೋತ್ಪಾದಕರ ವಿರುದ್ಧ ನಡೆಸಿರುವ ಜರ್ಬ್-ಇ-ಅಜಬ್ ಸೇನಾ ಕಾರ್ಯಾಚರಣೆಗಾಗಿ ಇಬ್ಬರೂ ನಾಯಕರನ್ನು ಶರೀಫ್ ಅಭಿನಂದಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಅಪ್ಘಾನಿಸ್ಥಾನದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡಿಸಲು ಅಧ್ಯಕ್ಷ ಘನಿ ಜೊತೆ ಕೆಲಸ ಮಾಡುವುದಾಗಿ ಶರೀಫ್ ತಿಳಿಸಿದ್ದಾರೆ. ಇದಕ್ಕೆ ದನಿಗೂಡಿಸಿದ ಘನಿ ಅವರು ಪಾಕಿಸ್ತಾನದ ಜೊತೆಗೆ ಉತ್ತಮ ಬಾಂಧವ್ಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಸಹಕಾರಕ್ಕೆ ಶ್ರಮಿಸುವುದಾಗಿ ತಿಳಿಸಿದ್ದಾರೆ.