ಇಸ್ಲಾಮಾಬಾದ್: ಕಾಶ್ಮೀರ ವಿವಾದ ವಿಷಯ ಪ್ರಸ್ತಾಪಿಸುವುದನ್ನು ಮುಂದುವರೆಸುವುದಾಗಿ ಹೇಳಿರುವ ಪಾಕಿಸ್ತಾನ, ಶಾಂತಿಯುತ ಮಾತುಕತೆ ಬಗ್ಗೆ ಭಾರತ ಗಂಭೀರವಾಗಿಲ್ಲ ಎಂದು ಆರೋಪಿಸಿದೆ.
ಪಾಕಿಸ್ತಾನ ಶಾಂತಿಯುತ ಮಾತುಕತೆಗೆ ಸಿದ್ಧವಾಗಿದ್ದರೂ ಭಾರತ ಅದನ್ನು ಕಡೆಗಣಿಸುತ್ತಿದೆ. ಅಷ್ಟೇ ಅಲ್ಲದೇ ಕಾಶ್ಮೀರ ವಿವಾದ ವಿಷಯವನ್ನು ದ್ವಿಪಕ್ಷೀಯ ಮಾತುಕತೆ ವೇಳೆ ಚರ್ಚಿಸಲು ಸಿದ್ಧವಿಲ್ಲ ಎಂದು ವಿಶ್ವಸಂಸ್ಥೆಯ ಪಾಕಿಸ್ತಾನ ಪ್ರತಿನಿಧಿ ಮಲೇಹ ಲೋಧಿ ಹೇಳಿದ್ದಾರೆ.
ಕಾಶ್ಮೀರ ವಿವಾದ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆಯೂ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ, ದ್ವಿಪಕ್ಷೀಯ ಮಾತುಕತೆಗಷ್ಟೇ ಅಲ್ಲದೇ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನಿರ್ಣಯ ಪಾಲನೆಗೂ ಸಹ ಭಾರತ ಅಡ್ಡಿ ವ್ಯಕ್ತಪಡಿಸುತ್ತಿದೆ ಎಂದು ಪಾಕಿಸ್ತಾನ ದೂರಿದೆ.