ಪಾಕಿಸ್ತಾನ ಮತ್ತು ಅಮೇರಿಕಾ ಆರ್ಥಿಕ ಸಂಬಂಧ ವೃದ್ಧಿಗೆ ಪ್ರೋತ್ಸಾಹ: ಸರ್ತಾಜ್
ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರ ವಾಶಿಂಗ್ಟನ್ ಪ್ರವಾಸದ ವೇಳೆಯಲ್ಲಿ ರಕ್ಷಣೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದಲ್ಲದೆ, ಅಮೆರಿಕಾದ ಜೊತೆಗೆ ಆರ್ಥಿಕ
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರ ವಾಶಿಂಗ್ಟನ್ ಪ್ರವಾಸದ ವೇಳೆಯಲ್ಲಿ ರಕ್ಷಣೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದಲ್ಲದೆ, ಅಮೆರಿಕಾದ ಜೊತೆಗೆ ಆರ್ಥಿಕ ಸಂಬಂಧ ವೃದ್ಧಿಯತ್ತ ಕೂಡ ಗಮನಾರ್ಹ ಮಾತುಕತೆಗಳು ನಡೆಯಲಿವೆ ಎಂದು ಪಾಕಿಸ್ತಾನ ತಿಳಿಸಿದೆ.
ಪ್ರಾದೇಶಿಕ ಮತ್ತು ಜಾಗತಿಕ ಹಿತಾಸಕ್ತಿಗಳಿಗೆ ಸಂಬಧಿಸಿದಂತೆ ಎರಡು ಪಕ್ಷಗಳು ಹಲವು ವಿಷಯಗಳ ಮೇಲೆ ಚರ್ಚೆ ನಡೆಸಲಿವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಅಮೆರಿಕಾದ ಜೊತೆ ಮಾತುಕತೆ ನಡೆಸುವ ವೇಳೆಯಲ್ಲಿ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ತಂದುಕೊಳ್ಳುವುದಿಲ್ಲ ಎಂದು ಅವರು ತಿಳಿಸಿರುವುದಾಗಿ ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ.
ಅಪ್ಘಾನಿಸ್ಥಾನದ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸರ್ತಾಜ್ ಉತ್ತರಿಸಿದ್ದಾರೆ.
ಅಪ್ಘಾನಿಸ್ಥಾನ ಬಯಸಿದರೆ ಅಲ್ಲಿನ ಸರ್ಕಾರ ಮತ್ತು ತಾಲಿಬಾನ್ ಬಣಗಳ ನಡುವೆ ಶಾಂತಿ ಮಧ್ಯಸ್ಥಿಕೆ ವಹಿಸಲು ಪಾಕಿಸ್ತಾನ ಸಿದ್ಧ ಎಂದು ಕೂಡ ಅವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.