ಐರಿಶ್ ನ ಏರ್ ಲಿಂಗಸ್ ವಿಮಾನ 
ವಿದೇಶ

ವಿಮಾನದಲ್ಲಿ ಸಹ ಪ್ರಯಾಣಿಕನ ಕಿವಿ ಕಚ್ಚಿ ಪ್ರಾಣ ಬಿಟ್ಟ ಯುವಕ

ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಚ್ಚಿದ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ...

ಡಬ್ಲಿನ್: ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಚ್ಚಿದ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಭಾನುವಾರ ಐರಿಶ್ ನ ಏರ್ ಲಿಂಗಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 24 ರ ಹರೆಯದ ಬ್ರೆಝಿಲ್ ಯುವಕ ಸಹ ಪ್ರಯಾಣಿಕನೊಂದಿಗೆ ಜಗಳವಾಡಿ ಆತನ ಕಿವಿ ಕಚ್ಚಿದ್ದಾನೆ. ತಕ್ಷಣ ಕೆಲವೇ ನಿಮಿಷದಲ್ಲಿ ಆತ ಕುಸಿದು ಬಿದ್ದಿದ್ದಾನೆ. ಆತನಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ ಕಾರ್ಕ್ ಸಿಟಿಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಈವರೆಗೂ ಆತ ಮೃತಪಟ್ಟ ಕಾರಣ ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. 
ಮೃತಪಟ್ಟ ಈ ಯುವಕನೊಂದಿಗೆ 44 ರ ಹರೆಯದ ಪೋರ್ಚುಗಲ್ ಮಹಿಳೆ ಪ್ರಯಾಣಿಸುತ್ತಿದ್ದಳು. ಆಕೆಯ ಬ್ಯಾಗಿನಲ್ಲಿ  2 ಕಿಲೊ ಗಳಷ್ಟು ಆ್ಯಂಫೆಟಮೈನ್ ಡ್ರಗ್ ಗಳು ಪತ್ತೆಯಾಗಿದೆ. ಇದನ್ನು ವಶಪಡಿಸಿಕೊಂಡಿರುವ ಕಾರ್ಕ್ ಸಿಟಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಅಲ್ಲದೇ, ಕಿವಿ ಕಚ್ಚಿಸಿಕೊಂಡ ವ್ಯಕ್ತಿಗೆ ಕಾರ್ಕ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ