ಇಮ್ರಾನ್ ಖಾನ್- ರೇಹಾಮ್ ಖಾನ್ 
ವಿದೇಶ

10 ತಿಂಗಳ ಹಿಂದೆ ಕೈಹಿಡಿದಿದ್ದ ಪತ್ನಿಗೆ ವಿಚ್ಛೇದನ ನೀಡಿದ ಮಾಜಿ ಕ್ರಿಕೆಟಿಗ

ಪಾಕಿಸ್ತಾನದ ಮಾಜಿ ಕ್ರಿಕೆಟಿಗ, ಹಾಲಿ ರಾಜಕಾರಣಿ, ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವರಿಷ್ಠ ಇಮ್ರಾನ್ ಖಾನ್ ಅವರು ತಮ್ಮ...

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಕ್ರಿಕೆಟಿಗ, ಹಾಲಿ ರಾಜಕಾರಣಿ, ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವರಿಷ್ಠ ಇಮ್ರಾನ್ ಖಾನ್ ಅವರು ತಮ್ಮ ಎರಡನೇ ಪತ್ನಿಗೆ ವಿಚ್ಛೇದನ ನೀಡಿದ್ದಾರೆ.
10 ತಿಂಗಳ ಹಿಂದೆಯಷ್ಟೇ ಪತ್ರಕರ್ತೆ ರೇಹಾಮ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು ಒಮ್ಮತದಿಂದ ವಿಚ್ಛೇದನ ನೀಡಿದ್ದು, ಕಾರಣಗಳು ತಿಳಿದು ಬಂದಿಲ್ಲ ಎಂದು ಪಿಟಿಐ ವಕ್ತಾರೊಬ್ಬರು ತಿಳಿಸಿದ್ದಾರೆ.
ರೇಹಾಮ್ ಖಾನ್ ಅವರನ್ನು ಮದುವೆಯಾಗುವ ಮುನ್ನ ಅವರ ಮೊದಲ ಪತ್ನಿಯಾಗಿದ್ದ ಜೆಮಿಮಾ ಖಾನ್ ಅವರಿಗೆ ವಿಚ್ಛೇದನ ನೀಡಿದ್ದರು. ಪಾಕಿಸ್ತಾನ ಮೂಲದ ಬ್ರಿಟಿಷ್ ಪತ್ರಕರ್ತೆಯಾಗಿದ್ದ ರೇಹಾಮ್ ಅವರು ಪ್ರಥಮ ಪತಿಯೊಂದಿಗೆ ವಿಚ್ಛೇದನ ಪಡೆದಿದ್ದರು. ಆಕೆಗೆ ಮೂವರು ಮಕ್ಕಳಿದ್ದಾರೆ. ಲಿಬಿಯಾದಲ್ಲಿ ಹುಟ್ಟಿದ್ದ ರೇಹಾಮ್ ಅವರ ತಂದೆ ಪಾಕಿಸ್ತಾನದ ಮೂಲದವರಾಗಿದ್ದರು. 
ಇಮ್ರಾನ್ ಖಾನ್ ಮತ್ತು ಮೊದಲ ಪತ್ನಿ ಜೆಮಿಮಾ ಖಾನ್ ನಡುವೆ 19 ವರ್ಷಗಳ ಅಂತರವಿತ್ತು. ಅವರು ತಮ್ಮ 42ನೇ ವಯಸ್ಸಿನಲ್ಲಿ 21ರ ಹರೆಯದ ಜಮೀಮಾ ಅವರನ್ನು ವರಿಸಿದ್ದರು. ನಂತರ ಇಮ್ರಾನ್ ತಮ್ಮ 62 ನೇ ವಯಸ್ಸಿನಲ್ಲಿ 42ರ ರೇಹಾಮ್ ಅವರನ್ನು ಕೈಹಿಡಿದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ