ಪಾಕಿಸ್ತಾನದ ಪ್ರತಿನಿಧಿ ಮಲೀಹಾ ಲೋಧಿ 
ವಿದೇಶ

ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ: ಭಾರತದ ಯತ್ನಕ್ಕೆ ಪಾಕ್ ಟೀಕೆ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆಯಲು ಯತ್ನಿಸುತ್ತಿರುವ ಭಾರತದ ಕ್ರಮವನ್ನು ಪಾಕಿಸ್ತಾನ ಪರೋಕ್ಷವಾಗಿ ಟೀಕಿಸಿದೆ.

ಯುನೈಟೆಡ್ ನೇಷನ್ಸ್: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆಯಲು ಯತ್ನಿಸುತ್ತಿರುವ ಭಾರತದ ಕ್ರಮವನ್ನು ಪಾಕಿಸ್ತಾನ ಪರೋಕ್ಷವಾಗಿ ಟೀಕಿಸಿದೆ.
ಭದ್ರತಾ ಮಂಡಳಿಯ ಪ್ರಾತಿನಿಧ್ಯದ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಪ್ರತಿನಿಧಿ ಮಲೀಹಾ ಲೋಧಿ, ಭದ್ರತಾ ಮಂಡಳಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯವಾಗದೇ ಇರುವುದಕ್ಕೆ  ಸ್ವಾರ್ಥ ಧೋರಣೆ, ಕುರುಡು ರಾಷ್ಟ್ರೀಯ ಆಕಾಂಕ್ಷೆಯನ್ನು ಹೊಂದಿರುವ ರಾಷ್ಟ್ರಗಳೇ ಕಾರಣ ಎಂದು ಹೇಳಿದ್ದಾರೆ.
ಭಾರತದ ಹೆಸರನ್ನು ನೇರವಾಗಿ ಪ್ರಸ್ತಾಪಿಸದೇ ಇದ್ದರೂ, ಪರೋಕ್ಷವಾಗಿ ಭಾರತವನ್ನು ಸ್ವಾರ್ಥಿ ಎಂದು ಪಾಕಿಸ್ತಾನ ಆರೋಪಿಸಿದೆ. ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಹಲವು ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿತಾದರೂ, ಪಾಕಿಸ್ತಾನ ಹಾಗೂ ಇಟಾಲಿ ಚರ್ಚೆಯಲ್ಲಿ ಅಸಂಗತ ವಿಷಯಗಳನ್ನು ಪ್ರಸ್ತಾಪಿಸಿದವು.     
ಸ್ವಾರ್ಥ ಧೋರಣೆ ಮೂಲಕ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಪಡೆಯಲು ಕೆಲವು ರಾಷ್ಟ್ರಗಳು ಯತ್ನಿಸುತ್ತಿವೆ, ಹೊಸ ಖಾಯಂ ಸದಸ್ಯ ರಾಷ್ಟ್ರಗಳ ಸೇರ್ಪಡೆ ಸಾರ್ವತ್ರಿಕವಾಗಿ ಸಮ್ಮತಿಸಲ್ಪಟ್ಟ ತತ್ವಗಳಿಗೆ ವಿರುದ್ಧವಾಗಿರುವ ಕಾರಣ ಪಾಕಿಸ್ತಾನದ ವಿರೋಧವಿದೆ ಎಂದು ಲೋಧಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT