ಚಿಲಿಯಲ್ಲಿ ಭೂಕಂಪನ (ಸಂಗ್ರಹ ಚಿತ್ರ) 
ವಿದೇಶ

ಚಿಲಿಯಲ್ಲಿ ಪ್ರಬಲ ಭೂಕಂಪನ, ಸುನಾಮಿ ಭೀತಿ

ಚಿಲಿ ದೇಶದ ಉತ್ತರ ಕರಾವಳಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ಸೂನಾಮಿ ಭೀತಿ ಆವರಿಸಿದೆ ಎಂದು ಮೂಲಗಳು ತಿಳಿಸಿವೆ...

ಸ್ಯಾಂಟಿಯಾಗೊ: ಚಿಲಿ ದೇಶದ ಉತ್ತರ ಕರಾವಳಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ಸೂನಾಮಿ ಭೀತಿ ಆವರಿಸಿದೆ ಎಂದು ಮೂಲಗಳು ತಿಳಿಸಿವೆ.

ಚಿಲಿ ದೇಶದ ಉತ್ತರ ಕರಾವಳಿಯಲ್ಲಿ ಕಳೆದ ರಾತ್ರಿ 8.3 ತೀವ್ರತೆ ಭಾರಿ ಭೂಕಂಪನ ಸಂಭವಿಸಿದ್ದು, ರಾಜಧಾನಿ ಸ್ಯಾಂಟಿಯಾಗೊದಲ್ಲಿ ಸಣ್ಣ ಪ್ರಮಾಣದ ಸುನಾಮಿ ಆಪ್ಪಳಿಸಿದೆ ಎಂದು  ಹೇಳಲಾಗುತ್ತಿದೆ. ಇನ್ನು ಮೂಲಗಳ ಪ್ರಕಾರ ಈ ಅವಘಡದಲ್ಲಿ ಕನಿಷ್ಟ ಐದು ಮಂದಿ ಸಾವನ್ನಪ್ಪಿದ್ದಾರೆ ಎಂದುತಿಳಿದುಬಂದಿದೆ. ದಕ್ಷಿಣ ಕರಾವಳಿಯಲ್ಲಿ 8.3 ತೀವ್ರತೆ ಭೂಕಂಪನ ಸಂಭವಿಸಿದ ಬಳಿಕ ಮತ್ತೆ ಅದೇ ಕರಾವಳಿಯಲ್ಲಿ 7.0 ಮತ್ತು 6.0 ತೀವ್ರತೆ ಉತ್ತರಾಘಾತ ಭೂಕಂಪನ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ಈಗಾಗಲೇ ಚಿಲಿದೇಶದಲ್ಲಿ ಸುನಾಮಿ ಎಚ್ಚರಿಕೆ ನೀಡಿದ್ದು, ಕರಾವಳಿ ತೀರದ ನಿವಾಸಿಗಳು ಕೂಡಲೇ ತಮ್ಮ-ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಪ್ರದೇಶಗಳಿಗೆ ಧಾವಿಸಬೇಕು ಎಂದು  ಸ್ಥಳೀಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಚಿಲಿಯಲ್ಲಿ ಮಾತ್ರವಲ್ಲದೆ ಚಿಲಿ ಅಕ್ಕಪಕ್ಕದ ರಾಷ್ಟ್ರಗಳಾದ ಬ್ಯೂನೋಸ್ ಏರ್ಸ್, ಅರ್ಜೆಂಟೀನಾ ದೇಶಗಳಲ್ಲಿ  ಭೂಕಂಪನದ ಅನುಭವವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಪ್ರಭಲ ಭೂಕಂಪನದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಚಿಲಿ ಅಧ್ಯಕ್ಷ ಮಿಷೆಲ್ ಬಾಕಲೆಟ್ ಅವರು, ದೇಶ ಅತಿ ದೊಡ್ಡ ಪ್ರಾಕೃತಿಕ ವಿಪತ್ತು ಎದುರಿಸಬೇಕಿದೆ ಎಂದು  ಹೇಳಿದ್ದಾರೆ. ಅಂತೆಯೇ ಚಿಲಿ ದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆಘೋಷಿಸಲಾಗಿದ್ದು, ಕರಾವಳಿ ತೀರದಲ್ಲಿ ಸುಮಾರು 2, 400 ಮೈಲಿಗಳಲ್ಲಿರುವ ಜನರನ್ನು  ಎತ್ತರದ ಪ್ರದೇಶಗಳಿಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಚಿಲಿಯ ಇಲ್ಲಾಪೆಲ್ ನಗರದಲ್ಲಿ ಹಲವು ಮನೆಗಳು ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ  ಎಂದು ತಿಳಿದುಬಂದಿದೆ.

ಈ ಹಿಂದೆ 1960ರಲ್ಲಿ ಚಿಲಿದೇಶದಲ್ಲಿ ಭಾರಿ ಪ್ರಮಾಣದ ಅಂದರೆ 9.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಭೂಕಂಪನದಿಂದಾಗಿ ಉಂಟಾದ ಸುನಾಮಿಯಿಂದಾಗಿ ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT